ನಮ್ಮದು ದಾಸೋಹ ಹಾಗೂ ಶಿಕ್ಷಣ ಪರಂಪರೆ ಹಾಗಾಗಿ ಪ್ರತಿಯೊಬ್ಬರನ್ನ ನಮ್ಮ ಜೊತೆಗೆ ಕರೆದುಕೊಂಡು ಹೋಗುವುದು ನಮ್ಮ ವೀರಶೈವ ಲಿಂಗಾಯತ ಧರ್ಮದ ಸಿದ್ಧಾಂತವೆಂದು ಬೆಟ್ಟದಹಳ್ಳಿಯ ಚಂದ್ರಶೇಖರ ಸ್ವಾಮೀಜಿ ತಿಳಿಸಿದರು.
ಗುಬ್ಬಿ ಪಟ್ಟಣದ ಬಾವಿ ಮನೆ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಾಲೂಕು ವೀರಶೈವ ಲಿಂಗಾಯತ ನೌಕರರ ಸಮಾವೇಶ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಗಮನ ಕೊಡದೆ ಇರುವುದು ದೊಡ್ಡ ದುರಂತವಾಗಿದೆ ಓದುತ್ತಿರುವ ಮಕ್ಕಳಿಗೆ ಸರಿಯಾದ ಶಿಕ್ಷಕರನ್ನು ನೀಡದೆ ಇರುವುದು ನೋಡಿದಾಗ ನಮ್ಮ ರಾಜಕೀಯ ಪಕ್ಷಗಳಿಗೆ ರಾಜಕೀಯ ಮುಖಂಡರಿಗೆ ಶಿಕ್ಷಣದ ಜ್ಞಾನವೇ ಇಲ್ಲವೇನೋ ಎನಿಸುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರು.
ಸಂಸ್ಥೆ ನಡೆಸುತ್ತಿರುವ ಶಾಲೆಗಳಲ್ಲಿ ಶಿಕ್ಷಕರು ನಿವೃತ್ತರಾಗಿ ಸುಮಾರು ಏಳು ವರ್ಷ ಕಳೆದರು ಇದುವರೆಗೂ ತುಂಬುವ ಕೆಲಸವನ್ನು ಮಾಡುತ್ತಿಲ್ಲ. ನಮ್ಮ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರವನ್ನು ಕಲಿಸುವಂತಹ ಶಿಕ್ಷಣ ಈಗ ಅವಶ್ಯಕತೆಯಾಗಿ ಬೇಕಾಗಿದೆ. ಇಂತಹ ಕಾರ್ಯಕ್ರಮಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುತ್ತಿರುವುದು ಸಂತಸದ ಸಂಗತಿ ಎಂದರು.
ಬಿಜೆಪಿ ಮುಖಂಡ ಎಸ್ಡಿ ದಿಲೀಪ್ ಕುಮಾರ್ ಮಾತನಾಡಿ, ಇಂದು ಪ್ರಪಂಚ ಬಹಳ ವಿಶಾಲವಾಗಿದ್ದು ನಿಮ್ಮಲ್ಲಿ ಪ್ರತಿಭೆ ಇದ್ದರೆ ಏನನ್ನು ಬೇಕಾದರೂ ಸಾಧಿಸಬಹುದಾಗಿದೆ ಸಾಧನೆ ಮಾಡಬೇಕು ಎಂದರೆ ಮೊದಲು ಗುರಿ ಇಟ್ಟುಕೊಂಡು ತಾವೆಲ್ಲರೂ ಮುಂದೆ ಸಾಗಬೇಕು ಸಮಾಜಕ್ಕೆ ನಾವು ಏನಾದರೂ ಕೊಡುಗೆ ನೀಡಿದರೆ ಸಮಾಜ ನಮಗೆ ಖಂಡಿತವಾಗಿಯೂ ರಕ್ಷಣೆಯನ್ನು ನೀಡುತ್ತದೆ ಪೋಷಕರನ್ನ ಹಾಗೂ ಗುರುಗಳನ್ನು ದೇವರಂತೆ ತಾವು ಕಂಡಾಗ ಮಾತ್ರ ತಾವು ಓದಿರುವುದಕ್ಕೂ ಸಾರ್ಥಕವಾಗುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವೀರಶೈವ ನೌಕರರ ತಾಲೂಕು ಘಟಕದ ಅಧ್ಯಕ್ಷ ರವೀಶ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಯತೀಶ್, ಶಿವ ಬಸವ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಯೋಗಾನಂದ, ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಹೇರೂರು ರಮೇಶ್, ಇತರರು ಭಾಗವಹಿಸಿದ್ದರು.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EAp8zUqF6y43cTFbQE5jEU
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA