ತುಮಕೂರು: ವೀರಶೈವ, ಲಿಂಗಾಯತ ಸಮಾಜ ನೀಡುವ ಕೈಗಳೇ ಹೊರತು, ಬೇಡುವ ಸಮುದಾಯವಲ್ಲ ಎಂದು ಬೃಹತ್ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದರು.
ನಗರದ ಅರಳೇಪೇಟೆಯಲ್ಲಿ ವೀರಶೈವ ಸಮಾಜದ ವತಿಯಿಂದ ಜೀರ್ಣೋದ್ಧಾರಗೊಂಡಿರುವ ಬಸವೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ವೀರಶೈವ, ಲಿಂಗಾಯತ ಸಮಾಜ ನೀಡುವ ಕೈಗಳೇ ಹೊರತು, ಬೇಡುವ ಸಮುದಾಯವಲ್ಲ. ಸಮಾಜ ತಮ್ಮ ಶಕ್ತಿ ಮೀರಿ ದೇಣಿಗೆ ಸಂಗ್ರಹಿಸಿ ಐದು ಗರ್ಭಗುಡಿಗಳಿರುವ ದೇವಾಲಯ ಜೀರ್ಣೋದ್ಧಾರ ಮಾಡಿರುವುದೇ ಇದಕ್ಕೆ ಸಾಕ್ಷಿ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಸೊಗಡು ಶಿವಣ್ಣ, ವೀರಶೈವ ಸಮಾಜದ ಅಧ್ಯಕ್ಷ ಟಿ.ಬಿ.ಶೇಖರ್, ಉಪಾಧ್ಯಕ್ಷ ಚಂದ್ರಮೌಳಿ, ದೇವಾಲಯ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೋರಿ ಮಂಜಣ್ಣ ಮೊದಲಾದವರು ಉಪಸ್ಥಿತರಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700