ವಿಜಯಪುರ: ನಾಳೆ ಸಿಎಂ ವಿಜಯಪುರ ಜಿಲ್ಲಾ ಪ್ರವಾಸದ ಹಿನ್ನೆಲೆಯಲ್ಲಿ ವಿಜಯಪುರ ನಗರದಲ್ಲಿ ಕುಂಠಿತಗೊಂಡಿದ್ದ ರಸ್ತೆ ಕಾಮಗಾರಿಗಳು ತೀವ್ರ ಗತಿಯಲ್ಲಿ ಸಾಗುತ್ತಿವೆ. ವಿಜಯಪುರ ನಗರದ ಅಥಣಿ ರಸ್ತೆಯಲ್ಲಿ ಇತ್ತಿಚೆಗೆ ರಸ್ತೆ ಕಾಮಗಾರಿ ಆಮೆ ಗತಿಯಲ್ಲಿ ಸಾಗುತ್ತಿತ್ತು. ಸಿಎಂ ಬೊಮ್ಮಾಯಿ ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಸ್ತೆ ಕಾಮಗಾರಿಯನ್ನು ತೀವ್ರಗತಿಯಲ್ಲಿ ನಡೆಸತೊಡಗಿದೆ.
ನಾಳೆ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸಿಎಂ ಬೊಮ್ಮಾಯಿವರು ನಾಳೆ ಬೆಳಿಗ್ಗೆ 10:30ಕ್ಕೆ ಹೆಲಿಕಾಪ್ಟರ್ ಮೂಲಕ ಸೈನಿಕ ಸ್ಕೂಲ್ ಹೆಲಿಪ್ಯಾಡ್ ಗೆ ಬಂದಿಳಿದು 11.00 ಗಂಟೆಗೆ ಗಾಂಧಿ ವೃತ್ತದ ಬಳಿಯ ಅಟಲ್ ಬಿಹಾರಿ ವಾಜಪೇಯಿ ಪ್ರತಿಮೆಗೆ ಮಾಲಾರ್ಪನೆ ಮಾಡಲಿದ್ದಾರೆ.
ಬಳಿಕ 11.30ಕ್ಕೆ ಜಿಲ್ಲಾ ಪಂಚಾಯತ್ ಮೈದಾನದಲ್ಲಿ ನಡೆಯುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಂಡು ವಿಜಯಪುರ ನಗರ, ಬಬಲೇಶ್ವ, ಸಿಂದಗಿ, ನಾಗಠಾಣ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ವಿಜಯಪುರ ಜಿಲ್ಲಾ ಕಚೇರಿಗಳ ಸಂಕೀರ್ಣ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 2.00 ಗಂಟೆಗೆ ಹೆಲಿಕಾಪ್ಟರ್ ಮೂಲಕ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿಗೆ ತೆರಳಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy