ನವದೆಹಲಿ : ವಾಹನಗಳನ್ನು ವೇಗವಾಗಿ ಚಾಲನೆ ಮಾಡಿ ಮೃತಪಟ್ಟವರ ವರದಿ ಬಿಡುಗಡೆ ಮಾಡಿದ್ದು, ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋ ಈ ಕುರಿತಂತೆ ಬಿಡುಗಡೆ ಮಾಡಿರುವ ವರದಿಯಂತೆ , ಕಳೆದ ವರ್ಷ ಅತಿ ವೇಗದ ಚಾಲನೆಯಿಂದ ತಮಿಳುನಾಡಿನ ಬಳಿಕ ಕರ್ನಾಟಕದಲ್ಲಿಯೇ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.
ತಮಿಳುನಾಡಿನಲ್ಲಿ 11,419 ಮಂದಿ ಸಾವನ್ನಪ್ಪಿದ್ದರೆ ಕರ್ನಾಟಕದಲ್ಲಿ 8,797 ಮಂದಿ ಸಾವಿಗೀಡಾಗಿದ್ದಾರೆ. ಕಳೆದ ವರ್ಷ ದೇಶದಲ್ಲಿ ಒಟ್ಟು 4,03,116 ರಸ್ತೆ ಅಪಘಾತಗಳು ಸಂಭವಿಸಿದ್ದು ಈ ಪೈಕಿ 2,40,828 ಪ್ರಕರಣಗಳು ಅತಿ ವೇಗದ ಚಾಲನೆಯಿಂದ ಸಂಭವಿಸಿದೆ.
ಕಳೆದ ವರ್ಷ ಕರ್ನಾಟಕದಲ್ಲಿ ಒಟ್ಟು 34,647 ಅಪಘಾತ ಪ್ರಕರಣಗಳು ಸಂಭವಿಸಿದ್ದು,10,038 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ವೇಗದ ಚಾಲನೆಯಿಂದಲೇ 8,797 ಮಂದಿ ಸಾವನ್ನಪ್ಪಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz