ಪಾವಗಡ: ಮಾಜಿ ಸಚಿವರಾದ ವೆಂಕಟರಮಣಪ್ಪನವರು ಮತ್ತು ಪಾವಗಡದ ಶಾಸಕರು, ತುಮುಲ್ ಅಧ್ಯಕ್ಷರು ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಹೆಚ್.ವಿ.ವೆಂಕಟೇಶ್ ರವರು ವಸತಿ ಮತ್ತು ಅಲ್ಪಸಂಖ್ಯಾತ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರನ್ನು ಬೆಂಗಳೂರಿನಲ್ಲಿ ಸೋಮವಾರದಂದು ಭೇಟಿ ಮಾಡಿದರು.
ವೈ.ಎನ್.ಹೊಸಕೋಟೆಯಲ್ಲಿ ಜಾಮೀಯ ಮಸೀದಿ ನಿರ್ಮಾಣಕ್ಕೆ ಅನುದಾನ ಮತ್ತು ಮನೆಗಳಿಗೆ ಬೇಡಿಕೆ ಇಟ್ಟರು. ಈ ವೇಳೆ ಮಾನ್ಯ ಸಚಿವರು ಮಾತನಾಡಿ, ತಾಲ್ಲೂಕಿಗೆ ಈಗಾಗಲೇ 500 ಮನೆಗಳು ಮತ್ತು ಜಾಮಿಯ ಮಸೀದಿ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿರುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಶಾಸಕರಾದ ಶಿವಲಿಂಗೆಗೌಡ, ಅಬ್ಬಯ್ಯ ಪ್ರಸಾದ್ ಇದ್ದರು.
ವರದಿ : ನಂದೀಶ್ ನಾಯ್ಕ ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC