ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆ ತರಳಬಾಳು ಇಂಟರ್ನ್ಯಾಷನಲ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ತರಳಬಾಳು ಗುರುಪರಂಪರೆಯ ಚರಪಟ್ಟಾಧ್ಯಕ್ಷರಾದ ಲಿಂಗೈಕ್ಯ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿಯವರ100ನೇ ವರ್ಷದ ಜನ್ಮದಿನಾಚರಣೆಯನ್ನು ಆಚರಣೆ ಮಾಡಲಾಯಿತು.
ಹೆಚ್.ಸಿ.ಎಂ.ಜಿ ಕಾಲೇಜಿನ ಪ್ರಾಂಶುಪಾಲ ದೇವೇಂದ್ರ ನಾಯಕ್,ತರಳಬಾಳು ಇಂಟರ್ನ್ಯಾಷನಲ್ ಸ್ಕೂಲ್ ನ ಮುಖ್ಯ ಶಿಕ್ಷಕ ಹೆಚ್.ಬಿ.ವಿಜಯ ಕುಮಾರ್,ಪ್ರೌಢಶಾಲೆಯ ಮುಖ್ಯ ಶಿಕ್ಷಕ ವೀರಣ್ಣ ಗೌಡ್ರು ಸೇರಿದಂತೆ ಶಾಲಾ ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಶಾಲಾ ಮಕ್ಕಳಿಗೆ ಪರಿಸರದ ಬಗ್ಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ಗಿಡ ನೆಡುವುದರ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ಕೊಡಲಾಯಿತು.ಪರಿಸರ ಗೀತಾ ಗಾಯನ ಹಮ್ಮಿಕೊಳ್ಳಲಾಗಿತ್ತು.
ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ರವರ ಜೀವನ ವೃತ್ತಾಂತ,ಸೇವೆ,ಅವರ ಹಾಕಿ ಕೊಟ್ಟಂತಹ ಮಾರ್ಗವನ್ನು ನೆನೆಯಲಾಯಿತು.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB