ಬೆಂಗಳೂರು: ಸ್ಪಾ ಮತ್ತು ಸಲೂನ್ ಹೆಸರಿನಲ್ಲಿ ರಾಜ್ಯ, ಹೊರ ರಾಜ್ಯ, ವಿದೇಶಿ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎರಡು ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿಯ ಸಂದರ್ಭದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರು ಹಾಗೂ ನಾಲ್ವರು ಗಿರಾಕಿಗಳನ್ನು ಬಂಧಿಸಲಾಗಿದೆ. ರಾಜ್ಯ, ಹೊರ ರಾಜ್ಯ ಮತ್ತು ವಿದೇಶದ ಎಂಟು ಮಂದಿ ಯುವತಿಯರನ್ನು ರಕ್ಷಿಸಲಾಗಿದೆ.
ಸಲೂನ್ ಸೆಂಟರ್ ತೆರೆದು ಯುವತಿಯರನ್ನು ಅಕ್ರಮವಾಗಿ ಇರಿಸಿಕೊಂಡು ಗಿರಾಕಿಗಳನ್ನು ಸೆಳೆದು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಇಂದಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


