ಬೆಂಗಳೂರು: ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು(ಸೆಪ್ಟೆಂಬರ್ 24) ಕೊನೆಯುಸಿರೆಳೆದಿದ್ದಾರೆ.
ವಯೋಸಹಜ ಕಾಯಿಲೆ ಬಳಲುತ್ತಿದ್ದ ಬೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು.
94 ವರ್ಷದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.
ಸಿಎಂ ಸಂತಾಪ:
ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC