ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
ಈ ಕುರಿತು ಮಾಹಿತಿ ನೀಡಿರುವ ಡಿ.ಕೆ.ಶಿವಕುಮಾರ್ ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ನನಗೆ ಮತ್ತು ನನ್ನ ತಮ್ಮ ಡಿ.ಕೆ. ಸುರೇಶ್ ಗೆ ಇಡಿಯವರು ಮತ್ತೆ ನೋಟಿಸ್ ನೀಡಿದ್ದಾರೆ ಎಂದು ಹೇಳಿದ್ದಾರೆ.
7 ನೇ ತಾರೀಖು ನನಗೆ ಹಾಗೂ ಡಿ.ಕೆ .ಸುರೇಶ್ ಗೆ ನೋಟಿಸ್ ಕೊಟ್ಟಿದ್ದಾರೆ. ರಾಹುಲ್ ಗಾಂಧಿ ಅಂದು ಆದಿಚುಂಚನಗಿರಿಗೆ ಹೋಗುತ್ತಿದ್ದಾರೆ. 7ನೇ ತಾರೀಖು ಬಿಟ್ಟು ಬೇರೆ ದಿನ ಕೊಡಿ ಅಂತ ಇನ್ನೊಮ್ಮೆ ಮನವಿ ಮಾಡಿಕೊಂಡಿರುವುದಾಗಿ ಡಿಕೆಶಿ ಹೇಳಿದ್ದಾರೆ.
ಪ್ರಿಯಾಂಕ ಗಾಂಧಿ ಕೂಡ ಭೇಟಿ ನೀಡುವ ಸಾಧ್ಯತೆ ಇದೆ. ನಾನು ಇಲ್ಲದೇ ಹೋದ್ರೆ ತಪ್ಪಾಗುತ್ತದೆ. ಎಲ್ಲಾ ಜವಾಬ್ದಾರಿ ನನ್ನ ತಮ್ಮನೇ ಮಾಡುತ್ತಿದ್ದಾನೆ. ಇಲ್ಲಿಂದ ಅಲ್ಲಿಯವರಗೂ ಬ್ಯಾನರ್ ಕಟ್ಟುತ್ತಿದ್ದಾನೆ. ಆದಿಚುಂಚನಗಿರಿಯಲ್ಲಿ ರಾಹುಲ್ ಗಾಂಧಿ ತಂಗಲಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 7 ರಂದು ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


