ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ನೀಡಿದೆ.
ಭಾರತ್ ಜೋಡೋ ಯಾತ್ರೆ ಹಿನ್ನೆಲೆ ನಾಳೆ ವಿಚಾರಣೆ ಹಾಜರು ಕುರಿತು ವಿನಾಯ್ತಿ ನೀಡುವಂತೆ ಡಿ.ಕೆ ಶಿವಕುಮಾರ್ ಮನವಿ ಮಾಡಿದ್ದರು. ಆದರೆ ವಿಚಾರಣೆಗೆ ವಿನಾಯ್ತಿ ನೀಡಲು ನಿರಾಕರಿಸಿರುವ ಇಡಿ ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಡಿ.ಕೆ ಶಿವಕುಮಾರ್ ಗೆ ನೋಟಿಸ್ ನೀಡಿದೆ.
ಈ ಕುರಿತು ನಾಗಮಂಗಲದಲ್ಲಿ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ನಾನು ಭಾರತ್ ಜೋಡೋ ಇನ್ ಚಾರ್ಚ್ ಆಗಿದ್ದೇನೆ. ಹೀಗಾಗಿ ನಾಳೆ ವಿಚಾರಣೆಗೆ ಹಾಜರಾಗಲು ಆಗಲ್ಲ. ವಿನಾಯಿತಿ ನೀಡುವಂತೆ ಮನವಿ ಮಾಡಿದ್ದೆ. ಆದರೆ ನಾಳೆಯೇ ಬರಬೇಕೆಂದು ಇಡಿ ಸಮನ್ಸ್ ನೀಡಿದೆ. ಈ ಬಗ್ಗೆ ನಮ್ಮ ನಾಯಕರ ಜೊತೆ ಚರ್ಚೆ ಮಾಡುತ್ತೇನೆ. ನಾಯಕರು ಹೋಗು ಅಂದರೇ ಹೋಗುತ್ತೇನೆ. ಬೇಡ ಅಂದರೇ ಬಿಡ್ತೀನಿ. ಸಭೆ ಬಳಿಕ ಹೋಗಬೇಕೋ ಬೇಡವೋ ತೀರ್ಮಾನ ಮಾಡುತ್ತೇನೆ ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy