ವೀಡಿಯೊ ಕರೆ ಚಿತ್ರೀಕರಿಸಿಕೊಂಡು ನಿವೃತ್ತ ಸರ್ಕಾರಿ ನೌಕರರೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಲಾಗಿದ್ದು, ಈ ಸಂಬಂಧ ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಸ್ಥಳೀಯ ನಿವಾಸಿಯಾಗಿರುವ 74 ವರ್ಷ ವಯಸ್ಸಿನ ನಿವೃತ್ತ ನೌಕರರೊಬ್ಬರು ಸುಲಿಗೆ ಬಗ್ಗೆ ದೂರು ನೀಡಿದ್ದಾರೆ. ಮಹಿಳೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.


