ತುಮಕೂರು: ಉಡುಪಿಯ ಖಾಸಗಿ ಕಾಲೇಜೊಂದರಲ್ಲಿ ನಡೆದಿದೆ ಎನ್ನಲಾದ ಶೌಚಗೃಹದಲ್ಲಿ ವೀಡಿಯೋ ಮಾಡಿರೋ ಕುರಿತ ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿ ತುಮಕೂರು ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ಬಿಜೆಪಿ ಮುಖಂಡರು ಗೃಹ ಸಚಿವರು ಈ ಪ್ರಕರಣವನ್ನು ಹಗುರವಾಗಿ ಪರಿಗಣಿಸುತ್ತಿದೆ. ಹೀಗಾಗಿ ಇದರಲ್ಲಿ ಆರೋಪಿಗಳನ್ನು ರಕ್ಷಿಸುವ ಹುನ್ನಾರ ಅಡಗಿದೆ ಎಂದು ಆರೋಪಿಸಿದರು. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA