ತುಮಕೂರು: ತುಮಕೂರು ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಾಸಕರಾದ ರಾಜೇಶ್ ಗೌಡ ಅವರು, ಶಿರಾ ವಿಧಾನಸಭಾ ವ್ಯಾಪ್ತಿಯ ಭುವನಹಳ್ಳಿ ಹಾಗೂ ಲಕ್ಷ್ಮಿಸಾಗರ , ಮಾಗೋಡ್, ರತ್ನಸಂದ್ರ, ಹೊನ್ನಗೊಂಡನ ಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಜೊತೆಗೆ ಸಭೆ ನಡೆಸಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಮತಯಾಚಿಸಿದರು.
ಇನ್ನೂ ಸಭೆಯಲ್ಲಿ ಭುವನಹಳ್ಳಿ ಹಾಗೂ ಲಕ್ಷೀಸಾಗರ ಗ್ರಾಮ ಪಂಚಾಯಿತಿ ಸದಸ್ಯರು ಜೆಡಿಎಸ್, ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಬಳಿಕ ಮಾತನಾಡಿ, ಕೇಂದ್ರ ಹಾಗೂ ಬಿಜೆಪಿ ಸರ್ಕಾರದ ಆಡಳಿತ ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾಗಿರುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಯಾದ ಎನ್.ಲೋಕೇಶ್, ಬಿಜೆಪಿ ಗ್ರಾಮಾಂತರ ಅಧ್ಯಕ್ಷರು ರಂಗಸ್ವಾಮಿ, ಕರ್ನಾಟಕ ರಾಜ್ಯ ತೆಂಗು ಮತ್ತು ನಾರು ನಿಗಮ ಮಂಡಳಿ ಅಧ್ಯಕ್ಷರಾದ ಬಿ.ಕೆ.ಮಂಜುನಾಥ್, ರೇಷ್ಮೆ ನಿಗಮ ಮಂಡಳಿ ಎಸ್.ಆರ್.ಗೌಡ, ಶಿರಾ ಗ್ರಾಮಾಂತರ ಅಧ್ಯಕ್ಷರಾದ ರಂಗಸ್ವಾಮಿ, ಮಾಲಿ ಮರಿಯಪ್ಪ, ತರೂರು ಬಸವರಾಜ್, ಬಿಜೆಪಿ ಮುಖಂಡರಾದ ಮದ್ದೆವಳ್ಳಿ ರಾಮಕೃಷ್ಣಪ್ಪ, ಅಜ್ಜಣ್ಣ, ರಾಜಣ್ಣ, ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಭುವನಹಳ್ಳಿ, ಲಕ್ಷ್ಮಿಸಾಗರ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700