ತಿಪಟೂರು: ತಾಲೂಕಿನ ಹೊನವಳ್ಳಿ ಹೋಬಳಿ ಗುರುಗದಹಳ್ಳಿ ಗ್ರಾಮ ಪಂಚಾಯಿತಿ ಅಲ್ಲಿ ವಿಧಾನಪರಿಷತ್ ಚುನಾವಣೆ ಮತದಾನ ನಡೆಯುತ್ತಿದ್ದು, ಪಂಚಾಯತ್ ಸದಸ್ಯರೆಲ್ಲರೂ ಒಬ್ಬರಾಗಿ ಶಿಸ್ತಿನಿಂದ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.
ಪಂಚಾಯತ್ ಸಿಬ್ಬಂದಿ ವರ್ಗ, ಪೊಲೀಸ್ ಅಧಿಕಾರಿಗಳು, ಆಶಾ ಕಾರ್ಯಕರ್ತರು ತಮ್ಮ ಕಾರ್ಯವನ್ನು ಬಹಳ ಶಿಸ್ತಿನಿಂದ ನಿರ್ವಹಿಸಿದ್ದು, ಯಾವುದೇ ಗೊಂದಲಗಳಿಗೆ ಎಡೆ ಮಾಡಿಕೊಡದೇ ಮತದಾನ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಯಲು ಶ್ರಮಿಸಿದ್ದಾರೆ.
ಮತದಾನ ಮಾಡಲು ಬಂದ ಎಲ್ಲಾ ಸದಸ್ಯರಿಗೂ ಕೋವಿಡ್ 19 ಸುರಕ್ಷಾ ಕ್ರಮವಾಗಿ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ಮತಚಲಾಯಿಸಲು ಅವಕಾಶ ಮಾಡಿಕೊಡಲಾಗಿತ್ತು.
ವರದಿ: ಮಂಜು ಗುರುಗದಹಳ್ಳಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700