ವಿದ್ಯಾರ್ಥಿಗಳು ಓದಿನ ಜೊತೆಗೆ ಒಂದೊಂದು ಗಿಡ ನೆಡುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಈ ಮೂಲಕ ಪರಿಸರ ಸ್ನೇಹಿ ಆಗಬೇಕು ಎಂದು ಶಾಸಕ ಮಸಾಲ ಜಯರಾಮ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ತುರುವೇಕೆರೆ ತಾಲೂಕು ಮಾಯಸಂದ್ರ ಹೋಬಳಿ ಮಣೆ ಚಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 24.84 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ನೂತನ ಕಟ್ಟಡ ಉದ್ಘಾಟನೆ ಮಾಡಿ, ಅವರು ಮಾತನಾಡಿದರು.
ಕ್ಷೇತ್ರದ ಅಭಿವೃದ್ಧಿಗಾಗಿ ತುರುವೇಕೆರೆ ಕ್ಷೇತ್ರದ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣಗಳ ಸಂಸ್ಥೆ ಬೆಂಗಳೂರು, ವತಿಯಿಂದ ತುರುವೇಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗುಬ್ಬಿ ತಾಲೂಕಿನ ಮಾವಿನಹಳ್ಳಿ ಗ್ರಾಮದಲ್ಲಿ 24.55 ಕೋಟಿಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯನ್ನು ಈಗ ತಾನೇ ಉದ್ಘಾಟನೆ ಮಾಡಿ ಬಂದಿದ್ದೇನೆ. ಅಭಿವೃದ್ಧಿಯೇ ಮರೀಚಿಕೆಯಾದ ಈ ಭಾಗದಲ್ಲಿ ವಸತಿ ಶಾಲೆಗಳಿಗೆ ಆದ್ಯತೆಯನ್ನು ನೀಡಿ, ಇಲ್ಲಿಯೂ ಸಹ ನೂತನ ಶಾಲಾ ಕಟ್ಟಡವನ್ನು ತಂದಿದ್ದೇನೆ ಎಂದು ಅವರು ಹೇಳಿದರು.
ಈ ಎರಡು ವಸತಿ ಶಾಲೆಯಿಂದ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದ್ದು, ಈ ಎಲ್ಲಾ ವಿದ್ಯಾರ್ಥಿಗಳು ತಮ್ಮ ವಸತಿ ಶಾಲೆಯ ಆವರಣದಲ್ಲಿ ಒಂದೊಂದು ಗಿಡವನ್ನು ನೆಡುವ ಮೂಲಕ ಪರಿಸರ ಸ್ನೇಹಿ ಆಗಬೇಕು ಹಾಗೂ ಸ್ವಚ್ಛತೆಯನ್ನು ಕಾಪಾಡುವಂತೆ ಶಾಸಕರು ಸೂಚಿಸಿದರು.
ಈ ಸಂದರ್ಭದಲ್ಲಿ ತುರುವೇಕೆರೆ ತಹಶೀಲ್ದಾರ್ ವೈ.ಎಂ.ರೇಣು ಕುಮಾರ್, ಮಣೆಚೆಂಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಾಮಲಾ ವಸಂತಾಚಾರ್, ಉಪಾಧ್ಯಕ್ಷೆ ಪಾರ್ವತಿ, ಸದಸ್ಯ ಲಕ್ಷ್ಮಿದೇವಿ, ಕೊಂಡಜ್ಜಿ ವಿಶ್ವನಾಥ್ , ಯಶೋಧರ್ , ಕಾಂತರಾಜು , ವಸತಿ ಶಾಲೆಯ ಪ್ರಾಂಶುಪಾಲರಾದ ಗದಗಯ್ಯ ಹಿರೇಮಠ್, ಅರೆ ಮಲ್ಲೇನಹಳ್ಳಿ ವಸತಿ ಶಾಲೆಯ ಪ್ರಾಂಶುಪಾಲ ಪರಣ್ಣ ಹಾಗೂ ಇನ್ನಿತರ ವಸತಿ ಶಾಲೆಗಳ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಹಾಗೂ ಶಾಲಾ ಮಕ್ಕಳು ಭಾಗವಹಿಸಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA