ಮುಂಬೈ: 12 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಶಾಲೆಯ ಗಣಿತ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ.
57 ವರ್ಷದ ಆರೋಪಿ ಶಿಕ್ಷಕ ಕಳೆದ ಮೂರು ತಿಂಗಳಿನಿಂದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಸಂತ್ರಸ್ತೆ ಆರನೇ ತರಗತಿಯಲ್ಲಿ ಓದುತ್ತಿದ್ದು, ಕಳೆದ ಕೆಲವು ದಿನಗಳಿಂದ ಆಕೆಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಆಕೆಯ ತಾಯಿ ಏನಾಯಿತು ಎಂದು ವಿಚಾರಿಸಿದಾಗ ಸಂತ್ರಸ್ತೆ ತನಗಾದ ಅನ್ಯಾಯವನ್ನು ವಿವರಿಸಿದ್ದಾಳೆ .
ಏಪ್ರಿಲ್ 5ರಂದು ಆರೋಪಿಯು ಪರೀಕ್ಷೆಯ ನಂತರ ತನ್ನನ್ನು ಶಾಲೆಯ ವಿಜ್ಞಾನ ಪ್ರಯೋಗಾಲಯಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕಳೆದ ವರ್ಷ ಡಿಸೆಂಬರ್ 10ರಿಂದ ತನ್ನನ್ನು ಮದುವೆಯಾಗುವುದಾಗಿ ಹೇಳಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ನಮ್ಮ ನಡುವಿನ ಸಂಬಂಧವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದಾಳೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

