nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025
    Facebook Twitter Instagram
    ಟ್ರೆಂಡಿಂಗ್
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    • ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್
    • ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ
    • ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ : ಸಚಿವರಿಂದ ನೀಲನಕ್ಷೆ ಪರಿಶೀಲನೆ
    • ಎಸ್.ಎಸ್.ಎಲ್.ಸಿ. ಪರೀಕ್ಷೆ–2: ವೇಳಾ ಪಟ್ಟಿ ಪ್ರಕಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿಗಳು ಮತ್ತು ಪೋಷಕರ ಪಾಲಿಗೆ ಮರಣ ಶಾಸನವಾಗಿದೆ ನೀಟ್: HDK
    ರಾಜ್ಯ ಸುದ್ದಿ March 3, 2022

    ವಿದ್ಯಾರ್ಥಿಗಳು ಮತ್ತು ಪೋಷಕರ ಪಾಲಿಗೆ ಮರಣ ಶಾಸನವಾಗಿದೆ ನೀಟ್: HDK

    By adminMarch 3, 2022No Comments2 Mins Read
    hdk

    ವೈದ್ಯಶಿಕ್ಷಣದ ಕನಸು ಕಾಣುವ ಬಡ, ಮಧ್ಯಮ ವರ್ಗದ ಬದುಕನ್ನು ಛಿದ್ರಗೊಳಿಸುತ್ತಿರುವ ನೀಟ್ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- ನೀಟ್, ವಿದ್ಯಾರ್ಥಿಗಳು ಮತ್ತು ಪೋಷಕರ ಪಾಲಿಗೆ ಮರಣಶಾಸನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

    ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಉನ್ನತ ಶಿಕ್ಷಣವನ್ನು ಉಳ್ಳವರಿಗೆ ಮೀಸಲಿಟ್ಟು ಉಳಿದವರಿಗೆ ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ ಟೀಕಿಸಿದ್ದಾರೆ. ಉಕ್ರೇನ್ʼಗೆ ಮೆಡಿಕಲ್ ಓದಲು ಹೋಗಿ ರಷ್ಯಾ ದಾಳಿಗೆ ತುತ್ತಾದ ವಿದ್ಯಾರ್ಥಿ ನವೀನ್ ದುರಂತ ಸಾವು ನೀಟ್ ವ್ಯವಸ್ಥೆಯ ನಿರ್ಲಜ್ಜ ಮುಖವನ್ನು ಇಡೀ ದೇಶಕ್ಕೆ ದರ್ಶನ ಮಾಡಿಸಿದೆ. ಅರ್ಹತೆ ನೆಪದಲ್ಲಿ ಪ್ರತಿಭಾವಂತ ಆರ್ಥಿಕ ದುರ್ಬಲ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಮಾಡಲಾಗುತ್ತಿರುವ ಅನ್ಯಾಯಕ್ಕೆ ಅಂತ್ಯ ಹಾಡಬೇಕಿದೆ ಎಂದಿದ್ದಾರೆ.


    Provided by

    10ನೇ ತರಗತಿಯಲ್ಲಿ ಶೇ.96, 2ನೇ ಪಿಯುಸಿಯಲ್ಲಿ ಶೇ. 97 ಅಂಕ ಗಳಿಸಿದ್ದರೂ ನವೀನ್ʼಗೆ ಜಗತ್ತಿನ ಶಿಕ್ಷಣ ಕಾಶಿ ಭಾರತದಲ್ಲಿ ವೈದ್ಯಸೀಟು ಸಿಗಲ್ಲ. ಗ್ರಾಮೀಣ ವಿದ್ಯಾರ್ಥಿಯೊಬ್ಬ ಇಷ್ಟು ಉತ್ತಮ ಅಂಕ ಗಳಿಸುವುದು ಸುಲಭವಲ್ಲ. ಆದರೂ, ಆತನಿಗೆ ನಮ್ಮ ದೇಶದಲ್ಲಿ ವೈದ್ಯಶಿಕ್ಷಣವನ್ನು ನಿರಾಕರಿಸಲಾಗಿದೆ.ಭಾರತದಲ್ಲಿ ನಿರಾಕರಿಸಲ್ಪಟ್ಟ ಶಿಕ್ಷಣವನ್ನು ಹುಡುಕಿಕೊಂಡು ಉಕ್ರೇನ್ ಗೆ ಹೋಗಿ, ಅಲ್ಲಿ ಕಲಿತು ಇನ್ನೊಬ್ಬರ ಜೀವ ಉಳಿಸಲು ನೂರುಕಾಲ ಬಾಳಿ ಬದುಕಬೇಕಿದ್ದ ನವೀನ್ ಇಂದು ಜೀವ ಕಳೆದುಕೊಂಡು ವಿಶ್ವಗುರು ಆಗಬೇಕೆಂದು ಹಾತೊರೆಯುತ್ತಿರುವ ಭಾರತದ ಆತ್ಮಸಾಕ್ಷಿಗೆ ಪ್ರಶ್ನೆಯಾಗಿದ್ದಾನೆ. ಇದಕ್ಕೆ ಯಾರು ಹೊಣೆ?ನೀಟ್ ಭಾರತದ ಮಧ್ಯಮ, ಬಡವರ್ಗದ ಮಕ್ಕಳ ಮೆಡಿಕಲ್ ಕನಸನ್ನು ಮರೀಚಿಕೆಯನ್ನಾಗಿಸಿದೆ. ಅದು ವಕ್ಕರಿಸಿದ ಮೇಲೆ ಟ್ಯೂಷನ್ ಅಂಗಡಿಗಳು ನಾಯಿಕೊಡೆಗಳಂತೆ ಮೇಲೆದ್ದಿವೆ. ಕೋಟಿ ಕೋಟಿ ವ್ಯಾಪಾರ ಆಗುತ್ತಿದೆ. ಅವು ವಿದ್ಯಾರ್ಥಿಗಳಿಂದ ಲಕ್ಷ ಲಕ್ಷ ಪೀಕುತ್ತಿವೆ ಮತ್ತೂ ಶೇ.99ರಷ್ಟು ಕೋಚಿಂಗ್ ಪಡೆದ ವಿದ್ಯಾರ್ಥಿಗಳೇ ನೀಟ್ ಪಾಸ್ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

    ಸರಕಾರಿ ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ ನೀಟ್ ತೇರ್ಗಡೆ ಕಷ್ಟಸಾಧ್ಯ. ಈ ದೌರ್ಬಲ್ಯವನ್ನರಿತೇ ಟ್ಯೂಷನ್ ಅಂಗಡಿಗಳು ಮಾರುಕಟ್ಟೆ ವಿಸ್ತರಿಸಿ ನವೀನ್ ರಂಥ ವಿದ್ಯಾರ್ಥಿಗಳ ಶವಗಳ ಮೇಲೆ ರಣಕೇಕೆ ಹಾಕುತ್ತಿವೆ. ನೀಟ್ ಹೆಸರಿನಲ್ಲಿ ನೀಟಾಗಿ ಉಳ್ಳವರಿಗೆ ವೈದ್ಯ ಶಿಕ್ಷಣವನ್ನು ದಾಸೋಹ ಮಾಡುವ ದಂಧೆ ವಿರುದ್ಧ ಎಲ್ಲರೂ ದನಿ ಎತ್ತಬೇಕಿದೆ.ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರ ಹೇಳಿಕೆ ನನಗೆ ಅಚ್ಚರಿ ತಂದಿದೆ. ವಿದೇಶದಲ್ಲಿ ವೈದ್ಯಪದವಿ ಪಡೆಯುವ ಶೇ.90 ರಷ್ಟು ವಿದ್ಯಾರ್ಥಿಗಳು ಭಾರತದಲ್ಲಿ ಅಗತ್ಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದಿಲ್ಲ. ವಿದೇಶ ಮತ್ತು ಭಾರತದಲ್ಲಿ ವೈದ್ಯಶಿಕ್ಷಣಕ್ಕೆ ಆಗುವ ವೆಚ್ಚದ ಬಗ್ಗೆ ಚರ್ಚೆ ಬೇಡ. ಆ ಚರ್ಚೆಗೆ ಇದು ಸಮಯವೂ ಅಲ್ಲ ಎಂದಿದ್ದಾರೆ ಅವರು.

    ಕೇಂದ್ರದ ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ ಮಂತ್ರಿಗಳೇ, ವೆಚ್ಚದ ಹೋಲಿಕೆ ಮಾಡಲು ನಾನು ಬಯಸುವುದಿಲ್ಲ. ಯಾವುದೇ ವಿವಾದ ಅಥವಾ ಚರ್ಚೆಗೆ ನಾನೀಗ ಕಾರಣನಾಗುವುದಿಲ್ಲ”ಎಂದು ಹೇಳುವುದರ ಹಿಂದಿನ ಮರ್ಮವೇನು? ಅವರ ಹೇಳಿಕೆ ಅನೇಕ ಗುಮಾನಿಗಳಿಗೆ ಕಾರಣವಾಗಿದೆ ಎಂದು ಸಂದೇಹ ವ್ಯಕ್ತಪಡಿಸಿದ್ದಾರೆ.

    ಟ್ಯೂಷನ್ ಅಂಗಡಿಗಳ ಹಿಂದೆ ಯಾರಿದ್ದಾರೆ? ಯಾರಿಗೂ ಕಾಣದಂತೆ ಕೇಂದ್ರ ಸರಕಾರವೇ ಅವಿತು ಕೂತಿದೆಯಾ? ನೀಟ್‌ ಸೃಷ್ಟಿಸಿದ ಶೈಕ್ಷಣಿಕ ಅರಾಜಕತೆಗೆ ಇನ್ನೆಷ್ಟು ವಿದ್ಯಾರ್ಥಿಗಳು ಬಲಿಯಾಗಬೇಕು? ನವೀನ್‌ ಸಾವು ನೀಟ್‌ ಸಾಚಾತನವನ್ನೇ ಪ್ರಶ್ನಿಸಿದೆ. ಬಡಮಕ್ಕಳ ರಕ್ತವನ್ನು ಹೀರುವ, ಶ್ರೀಮಂತರಿಗಷ್ಟೇ ಮೀಸಲಾಗಿರುವ ವೈದ್ಯಶಿಕ್ಷಣದ ವ್ಯಾಪಾರೀಕರಣದೇಶಕ್ಕೆ ಅಪಮಾನಕರ. ವಿಶ್ವಗುರು, ರಾಷ್ಟ್ರೀಯ ಶಿಕ್ಷಣ ನೀತಿ ಎಂದೆಲ್ಲಾ ಬೊಬ್ಬೆ ಹೊಡೆಯುವ ಕೇಂದ್ರವು ಒಮ್ಮೆ ಶುದ್ಧ ಅಂತಃಕರಣದಿಂದ ಆಲೋಚಿಸಲಿ ಎಂದಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025

    ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಸ್ಯನಟ ರಾಕೇಶ್ ಪೂಜಾರಿ ಇನ್ನಿಲ್ಲ

    May 12, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025

    ಚಿತ್ರದುರ್ಗ: ಭಾರತ ಮತ್ತು ಪಾಕ್ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಏನು ಹೆಡ್ ಮಾಸ್ಟ್ರಾ?…

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.