ಬೆಂಗಳೂರು: ನಾಪತ್ತೆಯಾಗಿದ್ದ ಪಿಯುಸಿ ವಿದ್ಯಾರ್ಥಿಯೋರ್ವ ಎರಡು ದಿನದ ಬಳಿಕ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿಯಲ್ಲಿ ನಡೆದಿದೆ.
19 ವರ್ಷ ವಯಸ್ಸಿನ ಸೋಮನಾಥ್ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು, ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಸೋಮನಾಥ್ 5ನೇ ತಾರೀಕಿನಂದು ಸ್ನೇಹಿತರು ನನ್ನ ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅವರಿಗಿಂತ ಮೊದಲು ನಾನೇ ಸಾಯ್ತೀನಿ ಎಂದು ಡೆತ್ ನೋಟ್ ಬರೆದಿಟ್ಟು, ಮನೆಯಿಂದ ನಾಪತ್ತೆಯಾಗಿದ್ದ ಎನ್ನಲಾಗಿದೆ.
ಈ ಬಗ್ಗೆ ಆತನ ಪೋಷಕರು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು. ಇದಾದ ಬಳಿಕ ಮಾರತ ಹಳ್ಳಿ ಬಳಿ ಎಮ್ ಸ್ಯಾಂಡ್ ಅನ್ ಲೋಡ್ ಮಾಡುವ ಲಾರಿಯಲ್ಲಿ ಸೋಮನಾಥ್ ನ ಮೃತದೇಹ ಪತ್ತೆಯಾಗಿತ್ತು. ತಮಿಳುನಾಡಿನಿಂದ ಮರಳು ತುಂಬಿಕೊಂಡು ಬಂದಿದ್ದ ಟಿಪ್ಪರ್ ಲಾರಿಯಲ್ಲಿ ಮೃತದೇಹ ಪತ್ತೆಯಾಗಿತ್ತು.
ಅಪರಿಚಿತ ಶವ ಯಾವುದೆಂದು ತಿಳಿಯಲು ತಮಿಳುನಾಡು ಕ್ವಾರಿ ಮತ್ತು ಕೆ.ಆರ್ .ಪುರಂ ಸ್ಟಾಂಡ್ ನಲ್ಲೆ ಪೊಲೀಸರು ವಿಚಾರಣೆ ಮಾಡಿದ್ದಾರೆ.ಈ ವೇಳೆ ಹೊಸಕೋಟೆ ನಿವಾಸಿ ಎನ್ನುವುದು ತಿಳಿದು ಬಂದಿದೆ.
ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಇದು ಕೊಲೆಯಾ ಅಥವಾ ಲಾರಿಯಲ್ಲಿ ಆಕಸ್ಮಿಕವಾಗಿ ಸಿಲುಕಿ ಸಾವು ನಡೆದಿದೆಯಾ? ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ವಿದ್ಯಾರ್ಥಿ ಲಾರಿಗೆ ಹತ್ತಿದ್ದು ಹೇಗೆ ಎಂಬ ವಿವಿಧ ಆಯಾಮದ ತನಿಖೆ ನಡೆಯುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


