ಕೊಪ್ಪಳ: ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ಪ್ರಧಾನಮಂತ್ರಿ ಕೌಶಲ್ಯ ವಿಕಾಸ್ ಯೋಜನೆ (3.0) ಅಡಿಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್, ಕೊಪ್ಪಳ ವತಿಯಿಂದ ಕೊಪ್ಪಳ ಹಾಗೂ ಯಲಬುರ್ಗಾ ತಾಲೂಕಿನಲ್ಲಿ ಶಾಲೆ ಬಿಟ್ಟ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಉಚಿತ ಕೌಶಲ್ಯ ತರಬೇತಿಗಳನ್ನು ನೀಡಲು ಸ್ಕಿಲ್ ಹಬ್ ಸೆಂಟರ್ ತೆರೆಯಲಾಗುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಬಹುದು.
ಐಟಿ/ಐಟಿಇಎಸ್ ಹಾಗೂ ಆಟೋಮೊಬೈಲ್ಸ್ ಸೆಕ್ಟರ್ಗಳಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಸರಕಾರಿ ಪದವಿ ಪೂರ್ವ ಕಾಲೇಜು, ಯಲಬುರ್ಗಾದಲ್ಲಿ ಹಾಗೂ ಬ್ಯೂಟಿ ಮತ್ತು ವೆಲ್ನೆಸ್ ಹಾಗೂ ಐಟಿ/ಐಟಿಇಎಸ್ ಸೆಕ್ಟರ್ನಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಕೊಪ್ಪಳದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸರಕಾರಿ ಪದವಿ ಪೂರ್ವ ಕಾಲೇಜು, ಯಲಬುರ್ಗಾ ಮೊ.ಸಂ: 9964221446, ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಕೊಪ್ಪಳ, ಮೊ.ಸಂ: 8548016504. ಜಿಲ್ಲಾ ಕೌಶಲ್ಯ ಮಿಷನ್, ಕೊಪ್ಪಳ ಮೊ.ಸಂ: 9743839859, 8050651602 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB