ಬೆಂಗಳೂರು: 2021-22ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ನ. 30 ಕೊನೆಯ ದಿನಾಂಕವಾಗಿತ್ತು. ಆದರೆ ಇದೀಗ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಡಿಸೆಂಬರ್ 31ರವರೆಗೆ ಈ ದಿನಾಂಕವನ್ನು ವಿಸ್ತರಿಸಲಾಗಿದೆ.
ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪುವರ್ಗ-1 ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ `ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, ಮತ್ತು “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನ”, ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.
ಅರ್ಜಿ ಸಲ್ಲಿಸಲು ನವೆಂಬರ್ 30ಕ್ಕೆ ಕೊನೆಯ ದಿನಾಂಕವಾಗಿತ್ತು. ಆದರೆ ಈ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು/ವಿದ್ಯಾರ್ಥಿಗಳು/ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700