ಪಾವಗಡ: ವಿದ್ಯಾರ್ಥಿಗಳು ಕಷ್ಟ ಪಟ್ಟು ಓದುವುದಕ್ಕಿಂತ ಇಷ್ಟ ಪಟ್ಟು ಓದುವುದರಿಂದ ಹೆಚ್ಚು ಹೆಚ್ಚು ಅಂಕ ಗಳಿಸಲು ಸಹಕಾರಿಯಾಗುತ್ತದೆ ಎಂದು ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಕಾರ್ಯದರ್ಶಿಗಳಾದ ಡಾ.ಜಿ. ವೆಂಕಟರಾಮಯ್ಯ ವಿದ್ಯಾರ್ಥಿಗಳಿಗೆ ತಿಳಿಸಿದರು.
ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಪ್ರಥಮ ಸ್ಥಾನ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಲ್ಪ್ ಸೊಸೈಟಿ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕಟ್ಟಾ ನರಸಿಂಹ ಮೂರ್ತಿ ಮಾತನಾಡಿ, ಮಾನಂ ಶಶಿಕಿರಣ್ ಅಧ್ಯಕ್ಷತೆಯ ಹೆಲ್ಪ್ ಸೊಸೈಟಿ ಸಂಸ್ಥೆ ಸದಾ ಸಮಾಜ ಮುಖಿ ಸೇವೆಯ ಜೊತೆಗೆ, ಶಿಕ್ಷಣಕ್ಕೆ ಹೆಚ್ಚು ಪ್ರಾತಿನಿದ್ಯ ನೀಡುತ್ತಿದೆ. ಇಂದು ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಪಿ ಯು ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿ ತಾಲ್ಲೂಕಿಗೆ ಹಾಗೂ ಸಂಸ್ಥೆಗೆ ಕೀರ್ತಿ ದಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಸನ್ಮಾನಿಸುತ್ತಿರುವುದು ಅಭಿನಂದನರ್ಹ ಎಂದರು.
ಈ ಸಂದರ್ಭದಲ್ಲಿ ರೋಟರಿ ಸಂಸ್ಥೆ ಕಾರ್ಯದರ್ಶಿ ಸತ್ಯ ಲೋಕೇಶ್, ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ, ಹಳೆಯ ವಿದ್ಯಾರ್ಥಿ ಹಾಗೂ ಪತ್ರಕರ್ತ ನಂದೀಶ್ ನಾಯ್ಕ ಪಿ., ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಆಡಳಿತ ಮಂಡಳಿ, ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz