ತುಮಕೂರು: ಜಿಲ್ಲೆಯ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿಗೆ ಕೊವಿಡ್ ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿ ತಕ್ಷಣದಲ್ಲಿ ಕ್ರಮಕೈಗೊಂಡು 7 ದಿನಗಳ ಕಾಲ ಶಾಲೆಗೆ ರಜೆ ನೀಡಿ ಮುನ್ನೆಚ್ಚರಿಕೆ ಕೈಗೊಂಡಿದೆ.
9ನೇ ತರಗತಿಯ ವಿದ್ಯಾರ್ಥಿಗೆ ಕೊವಿಡ್ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ಪೋಷಕರು ಶಾಲೆಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಸೋಮವಾರವೇ ಶಾಲಾಗೆ ಆಡಳಿತ ಮಂಡಳಿ ರಜೆ ನೀಡಿದ್ದು, 9ನೇ ತರಗತಿಯಲ್ಲಿದ್ದ 34 ವಿದ್ಯಾರ್ಥಿಗಳಿಗೆ ಕೊವಿಡ್ ಟೆಸ್ಟ್ ನಡೆಸಲಾಗಿದೆ. ಜೊತೆಗೆ ವಿದ್ಯಾರ್ಥಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 6 ಮಕ್ಕಳಿಗೂ ಕೊವಿಡ್ ಟೆಸ್ಟ್ ನಡೆಸಲಾಗಿದ್ದು, ಈ ವಿದ್ಯಾರ್ಥಿಗಳಿಗೆ ನೆಗೆಟಿವ್ ರಿಪೋರ್ಟ್ ಬಂದಿದೆ.
1ರಿಂದ 10ನೇ ತರಗತಿಯವರೆಗೆ ಈ ಶಾಲೆಯಲ್ಲಿ ತರಗತಿ ನಡೆಯುತ್ತಿದೆ. ಶಾಲೆಯಲ್ಲಿ ಒಟ್ಟು 700 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ವಿದ್ಯಾರ್ಥಿಗೆ ಕೊವಿಡ್ ಪಾಸಿಟಿವ್ ಬಂದ ತಕ್ಷಣವೇ ಶಾಲೆಯ ಆಡಳಿತ ಮಂಡಳಿ ತಕ್ಷಣದಲ್ಲಿಯೇ ಕ್ರಮಕೈಗೊಂಡಿದ್ದು, ಶಾಲೆಗೆ ರಜೆ ನೀಡಿ, ಪ್ರತಿ ದಿನ ಶಾಲೆಯಲ್ಲಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೂ ರಜೆ ನೀಡಲಾಗಿದೆ.
ಶಾಲೆಗೆ ರಜೆ ನೀಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಇಲ್ಲದಿದ್ದರೂ, ಆನ್ ಲೈನ್ ಕ್ಲಾಸ್ ಮೂಲಕ ಪಾಠ ಮಾಡಲಾಗುತ್ತಿದೆ ಎಂದು ಶಾಲಾ ಆಡಳಿತ ಮಂಡಳಿ ಬಸವರಾಜು ತಿಳಿಸಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700