ಕುಣಿಗಲ್: ಎಸೆಸೆಲ್ಸಿ ಪರೀಕ್ಷೆಗೆ ಸ್ನೇಹಿತರ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಯೊಬ್ಬ ಬೈಕ್ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಇಂದು ಬೆಳಗ್ಗೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಮೃತೂರು ಬಳಿಯ ನವೀನ್ ಎಂಬಾತ ಸ್ಥಳದಲ್ಲೇ ಮೃತಪಟ್ಟು ಬೈಕಿನಲ್ಲಿ ತೆರಳುತ್ತಿದ್ದ ಮತ್ತಿಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ .
ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಅಮೃತೂರು ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ಎನ್ನಲಾಗಿದೆ. ಕಳೆದ ಐದು ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ಬರೆಯುವ ಸಂಬಂಧ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಬೆನ್ನಲ್ಲೇ ಹೃದಯಾಘಾತಕ್ಕೆ ಈಡಾಗಿ ಅಸುನೀಗಿದಳು, ಇನ್ನು ಆ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿರುವುದು ನಿಜಕ್ಕೂ ದುರದೃಷ್ಟಕರ.
ವರದಿ: ಮಾರುತಿ ಪ್ರಸಾದ್ ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5