ಬೆಳಗಾವಿ: ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸಿನ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಜನವರಿ 20, 2023 ರವರೆಗೆ ಇದ್ದು, ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2022-23ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಯ ಪೋಷಕರ ಆದಾಯ ಮಿತಿ: ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1.00 ಲಕ್ಷ ಮೀರಿರಬಾರದು.
ಇಲಾಖೆಯ ವೆಬ್ ಸೈಟ್ https://shp.karnataka.gov.in ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬೇಕು.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಇಲಾಖೆಯ ವೆಬ್ ಸೈಟ್ https://shp.karnataka.gov.in ನಲ್ಲಿ ಮಾಹಿತಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ bcwd.hostels@karnataka.gov.in ಗೆ ಇ-ಮೇಲ್ ಮುಖಾಂತರ ಸಂಪರ್ಕಿಸಬಹುದಾಗಿದೆ ಎಂದು ಬೆಳಗಾವಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


