ತಿಪಟೂರು: ತಾಲೂಕಿನ ಹೋನವಳ್ಳಿ ಹೋಬಳಿಯ ಗುರುಗದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರುಗದಹಳ್ಳಿ ಕಾಲೋನಿಯಲ್ಲಿರುವ ವಿದ್ಯುತ್ ಕಂಬ ಬೀಳುವ ಸ್ಥಿತಿಯಲ್ಲಿದ್ದು, ಗ್ರಾಮಸ್ಥರು, ವಾಹನ ಸವಾರರು ದಿನ ನಿತ್ಯ ಜೀವ ಕೈಯಲ್ಲಿ ಹಿಡಿದುಕೊಂಡು ಆತಂಕದಿಂದ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.
ಇದೇ ಗ್ರಾಮದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ಎನ್ ಮೂರ್ತಿ ಸ್ಥಾಪಿತ), ತಾಲೂಕು ಯುವ ಘಟಕ ಅಧ್ಯಕ್ಷರಾದ ಗುರುಗದಹಳ್ಳಿ ಮಂಜುನಾಥ್ ಮಾತನಾಡಿ, ದಿನನಿತ್ಯ ಇದೇ ಪ್ರದೇಶದಲ್ಲಿ ಸ್ಥಳೀಯ ಮಕ್ಕಳು ಆಟ ಆಡುತ್ತಿರುತ್ತಾರೆ. ಹೀಗಾಗಿ ಸಂಬಂಧಪಟ್ಟವರು ಏನಾದರೂ ಅನಾಹುತ ನಡೆಯುವ ಮೊದಲೇ ಎಚ್ಚೆತ್ತುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಇನ್ನೂ ಗ್ರಾಮಸ್ಥರ ಮನವಿಯ ಬಳಿಕವೂ ಎಚ್ಚೆತ್ತುಕೊಳ್ಳದಿದ್ದರೆ, ಮುಂದೆ ಏನಾದರೂ ಅನಾಹುತ ನಡೆದರೆ ಅದರ ಹೊಣೆಯನ್ನು ಬೆಸ್ಕಾಂ ಅಧಿಕಾರಿಗಳೇ ಹೊರಬೇಕಾಗುತ್ತದೆ. ಇನ್ನಾದರೂ ಬೆಸ್ಕಾಂ ಇಲಾಖೆ ಅಧಿಕಾರಿಗಳು ಕೂಡಲೇ ವಿದ್ಯುತ್ ಕಂಬವನ್ನು ಸರಿಪಡಿಸಿ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700