ತುಮಕೂರು: ವಿದ್ಯುತ್ ಖಾಸಗೀಕರಣ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು.
ನಗರದ ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ನೂರಾರು ರೈತರು. ಟೌನ್ ಹಾಲ್ ವೃತ್ತದಿಂದ ಬೆಸ್ಕಾಂ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದರು.
ರೈತರ ಪಂಪ್ ಸೆಟ್ ಗಳಿಗೆ ನಿರಂತರ ವಿದ್ಯುತ್ ಹರಿಸದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಖಾಸಗೀಕರಣದಿಂದ ವಿದ್ಯುತ್ ಗುತ್ತಿಗೆದಾರರು ಅತಂತ್ರಕ್ಕೆ ಒಳಗಾಗುವ ಭೀತಿ ಸೃಷ್ಟಿಯಾಗಿದೆ. ಅನುಮತಿ ಪಡೆದ ಕರ್ನಾಟಕ ವಿದ್ಯುತ್ ಗುತ್ತಿಗೆದಾರರ ಸಂಘ ಪ್ರತಿಭಟನೆಯಲ್ಲಿ ಭಾಗಿಯಾಗಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5