ತುಮಕೂರು: ತೆಂಗಿನ ಕಾಯಿ ಕೀಳಲು ಹೋಗಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬ ಗ್ರಾಮದಲ್ಲಿ ನಡೆದಿದೆ.
ತನ್ನ ತೋಟದಲ್ಲಿ ತೆಂಗಿನ ಕಾಯಿ ಕೀಳಲು ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ತೋಟದ ಮುಳ್ಳು ತಂತಿಯ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಈ ವಿಚಾರ ತಿಳಿಯದೇ ವ್ಯಕ್ತಿಯು ತೆಂಗಿನ ಕಾಯಿ ತೆಗೆದುಕೊಳ್ಳಲು ಹೋಗಿದ್ದು, ಈ ವೇಳೆ ವಿದ್ಯುತ್ ಸ್ಪರ್ಶಿಸಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸ್ ಠಾಣೆಯ ಪಿಎಸ್ ಐ ನಟರಾಜು ಮತ್ತು ಸಿಬ್ಬಂದಿ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ವರದಿ: ಮಂಜುನಾಥ್ ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5