ಬೆಂಗಳೂರು: ವಿದ್ಯುತ್ ಮೇಲೆ ವಿಧಿಸಿರುವ ಶೇ.9ರಷ್ಟು ತೆರಿಗೆಯಲ್ಲಿ ಶೇ.3ರಿಂದ 4ರಷ್ಟು ಕಡಿತ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು.
ಅಪರಿಮಿತವಾಗಿ ಹೆಚ್ಚಳವಾಗಿರುವ ವಿದ್ಯುತ್ ದರದ ಬಗ್ಗೆ ಬಿಕ್ಕಟ್ಟಿಗೆ ಸಿಲುಕಿರುವ IT & ESDM ವಲಯಗಳ ಸಣ್ಣ ಪ್ರಮಾಣದ ಕೈಗಾರಿಕಾ ಘಟಕಗಳ ಮುಖ್ಯಸ್ಥರ ಜತೆ ಮಾತುಕತೆ ನಡೆಸಿ ಅವರ ಅಹವಾಲು ಸ್ವೀಕರಿಸಿದ ನಂತರ ಮಾಜಿ ಮುಖ್ಯಮಂತ್ರಿಗಳು ಮಾಧ್ಯಮಗಳ ಜತೆ ಮಾತನಾಡಿದರು.
ದುಬಾರಿ ವಿದ್ಯುತ್ ದರದಿಂದ ಸಾರ್ವಜನಿಕರ ಜತೆಗೆ ಕೈಗಾರಿಕಾ ವಲಯವೂ ತೀವ್ರ ಸಂಕಷ್ಟಕ್ಕೆ ಸಿಕುಕಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಗ್ಯಾರಂಟಿಗಳ ಹೆಸರಿನಲ್ಲಿ ಜನರ ತುಟಿಗೆ ತುಪ್ಪ ಸವರುತ್ತಿರುವ ರಾಜ್ಯ ಸರ್ಕಾರ ವಿದ್ಯುತ್ ಮೇಲಿನ ತೆರಿಗೆಯಲ್ಲಿ ಕೊಂಚ ಕಡಿತ ಮಾಡಲಿ ಎಂದರು.
ಗೃಹಜ್ಯೋತಿ ಎಂದು ಹೇಳುತ್ತಾ ಎಲ್ಲರ ಮನೆಗಳಲ್ಲಿ ಜ್ಯೋತಿ ಬೆಳಗಿಸುವ ನಾಟಕ ಆಡುತ್ತಿರುವ ಕಾಂಗ್ರೆಸ್ ಸರಕಾರ, ಜನರ ಮೇಲೆ ಬೆಲೆ ಏರಿಕೆ ಬರೆ ಎಳೆಯುತ್ತದೆ. ಎರಡು ಪಟ್ಟು, ಮೂರು ಪಟ್ಟು ಹೆಚ್ಚು ದರ ವಿಧಿಸಿರುವ ವಿದ್ಯುತ್ ಬಿಲ್ಲುಗಳನ್ನು ನೀಡುತ್ತಿರುವುದು ಗೃಹಜ್ಯೋತಿಯೇ? ಅದು ಗೃಹಜ್ಯೋತಿಯಲ್ಲ, ಸುಡುಜ್ಯೋತಿ ಎಂದು ಮಾಜಿ ಮುಖ್ಯಮಂತ್ರಿ ಅವರು ಸರಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


