ವಿಜಯಪುರ: ಧರ್ಮಸ್ಥಳ ವಿಚಾರದಲ್ಲಿ ವಿಜಯೇಂದ್ರ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ ನಡೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರಗೆ ಬೇರೆ ಬಂಡವಾಳವಿಲ್ಲ, ಧರ್ಮಸ್ಥಳ ವಿಚಾರದಲ್ಲಿ ನಾವು ಮೊದಲು ಎಸ್ ಐಟಿ (SIT) ರಚಿಸಿದಾಗ ಬಿಜೆಪಿಯವರು (BJP) ಸ್ವಾಗತ ಮಾಡಿದ್ದರು. ಆದರೆ ಮುಸುಕುಧಾರಿ ತೋರಿಸಿದ ಜಾಗದಲ್ಲಿ ಏನೂ ಸಿಗದೇ ಇದ್ದ ಕಾರಣ ಇದೀಗ ತಿರುಗಿ ಬಿದ್ದಿದ್ದಾರೆ. ವಿಜಯೇಂದ್ರನಿಗೆ ಬೇರೆ ಬಂಡವಾಳ ಇಲ್ಲ. ಅಪಪ್ರಚಾರ ಮಾಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದ್ದಾನೆ ಎಂದರು.
ನಮ್ಮ ಜಾಗದಲ್ಲಿ ಬಿಜೆಪಿಯವರೇನಾದರೂ ಇದ್ದರೆ ಅವರೂ ಎಸ್‌ಐಟಿ ರಚಿಸುತ್ತಿದ್ದರು. ಆದರೆ ಇದೀಗ ದುರುಪಯೋಗಪಡಿಸಿಕೊಳ್ಳಲು ಹೊರಟಿದ್ದಾರೆ. ನಾವು ಎಸ್ ಐಟಿ ರಚನೆ ಮಾಡುವ ಮೂಲಕ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ಸನ್ನಿಧಾನ ಹಾಗೂ ಧರ್ಮದರ್ಶಿಗಳ ಮೇಲೆ ಇದ್ದಂತಹ ಕಳಂಕವನ್ನು ತೆಗೆದುಹಾಕಿದ್ದೇವೆ. ಜನರ ನಂಬಿಕೆಯನ್ನು ಹೆಚ್ಚಿಸಿದ್ದೇವೆ. ಎಸ್ ಐಟಿ ಅವರು ಈಗಲೂ ಪಾರದರ್ಶಕವಾಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ದೆಹಲಿಗೆ ಹೋಗಿ ಯಾರೆಲ್ಲ ಇದ್ದಾರೆ ಎನ್ನುವ ತನಿಖೆ ಮಾಡ್ತಿದೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC