ಸೂಕ್ತ ಸಮಯದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ವಿಜಯೇಂದ್ರಗೆ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ ಎಂದು ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಶುಭ ಹಾರೈಸಿದರು.
ವಿಧಾನಸಭೆ ಚುನಾವಣೆಯ ನಂತರ ಬಿಜೆಪಿಗೆ ಶಕ್ತಿ, ಉತ್ಸಾಹ ಬಂದಿದೆ. ಎಲ್ಲರೂ ಒಟ್ಟಾಗಿ ನಡೆದರೆ ಲೋಕಸಭೆಯಲ್ಲಿ ಯಶಸ್ಸು ಸಿಗುತ್ತದೆ. ವಿಜಯೇಂದ್ರ ಸಾರಥ್ಯದಲ್ಲಿ 28 ಲೋಕಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ ಎಂದರು.


