ಅಂದುಕೊಂಡಂತೆಯೇ ‘ವಿಕ್ರಾಂತ್ ರೋಣ’ ಅದ್ದೂರಿಯಾಗಿ ರಿಲೀಸ್ ಆಗಿದೆ. ಕರ್ನಾಟಕ ಮಾತ್ರವಲ್ಲದೆ ವಿಶ್ವಾದ್ಯಂತ ಈ ಚಿತ್ರ ಅಬ್ಬರಿಸಲು ಶುರು ಮಾಡಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಯ ಪ್ರೇಕ್ಷಕರು ಸಿನಿಮಾ ನೋಡಿ ಎಂಜಾಯ್ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ ಅವರ ಎಂಟ್ರಿ ಸೀನ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಎಲ್ಲ ಚಿತ್ರಮಂದಿರಗಳ ಎದುರಲ್ಲೂ ಸಡಗರ ಮನೆ ಮಾಡಿದೆ. ಪಟಾಕಿ ಹೊಡೆದು ಪ್ರೇಕ್ಷಕರು ಸಂಭ್ರಮಿಸುತ್ತಿದ್ದಾರೆ.
ವಿಕ್ರಾಂತ್ ರೋಣ ಚಿತ್ರಕ್ಕೆ ಸಿನಿಪ್ರಿಯರಿಂದ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ವಿಶ್ವಾದ್ಯಂತ ಸಾವಿರಾರು ಸ್ಕ್ರೀನ್ ಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಶ್ರೀಶೈಲ ಚಿತ್ರಮಂದಿರ ಹಾಗೂ ಪುಷ್ಪಾಂಜಲಿ ಚಿತ್ರಮಂದಿರಗಳಲ್ಲಿ ವಿಕ್ರಾಂತ್ ರೋಣ ಚಿತ್ರ ಚಿತ್ರ ಬಿಡುಗಡೆಯಾಗಿದ್ದು, ಎರಡು ಚಿತ್ರ ಮಂದಿರಗಳಲ್ಲಿ ಚಿತ್ರ ಇದ್ದರೂ, ಟಿಕೆಟ್ ಖರೀದಿಗೆ ನೂಕು ನುಗ್ಗಲು ಕಂಡು ಬಂತು.
ಕಿಚ್ಚ ಸುದೀಪ್ ಅಭಿನಯದ ವಿಕ್ರಂತ್ ರೋಣ ಸಿನಿಮಾ ವಿಶ್ವಾದ್ಯಂತ ಅನೇಕ ರಾಷ್ಟ್ರಗಳಲ್ಲಿ ಈ ಸಿನಿಮಾ ರಿಲೀಸ್ ಆಗಿದ್ದು , ಮೊದಲ ದಿನದ ಎಲ್ಲಾ ಟಿಕೆಟ್ ಗಳು ಸೋಲ್ಡ್ ಆಗಿವೆ ಎಂದು ಹೇಳಲಾಗಿದೆ. ಕರ್ನಾಟಕದ ಎಲ್ಲೆಡೆ ಕಿಚ್ಚ ಸುದೀಪ್ ಅಭಿಮಾನಿಗಳು ಈ ಚಿತ್ರಕ್ಕೆ ಭರ್ಜರಿ ಸ್ವಾಗತ ಕೋರಿದ್ದಾರೆ.
ರೋಣ ಚಿತ್ರವು ಬೆಳಗ್ಗೆ ಏಳು ಗಂಟೆಯಿಂದಲೇ ಪ್ರದರ್ಶನ ಆರಂಭ ಆಗಿದೆ. ಕರ್ನಾಟಕದ ಎಲ್ಲೆಡೆ ಕಿಚ್ಚ ಸುದೀಪ್ ಅಭಿಮಾನಿಗಳು ಈ ಚಿತ್ರವನ್ನು ಭರ್ಜರಿಯಾಗಿ ಸ್ವಾಗತಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.
ಕಳೆದ ರಾತ್ರಿಯಿಂದಲೇ ಕಿಚ್ಚ ಸುದೀಪ್ ಅಭಿಮಾನಿಗಳು ಥಿಯೇಟರ್ ನ ಆವರಣದ ಮುಂಭಾಗ ಗಳಲ್ಲಿ ಕಿಚ್ಚ ನ ಬ್ಯಾನರ್ ಗಳು ಹಾಕುವುದರ ಜೊತೆಗೆ ಇಂದು ಕಿಚ್ಚ ವಿಕ್ರಾಂತ್ ರೋಣದ ಕಟೌಟ ಗೆ ಹಾಲಿನ ಅಭಿಷೇಕ ಮಾಡಿದ್ದಾರೆ.
ವರದಿ:- ಮುರುಳಿಧರನ್ ಆರ್. ಚಿತ್ರದುರ್ಗ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz