ಹೆಚ್.ಡಿ.ಕೋಟೆ: ಹೆಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಗ್ರಾಮಲೆಕ್ಕಾಧಿಕಾರಿಗಳು ವೃತ್ತಗಳಲ್ಲಿ ಕಾರ್ಯನಿರ್ವಹಿಸದೇ ನಿರ್ಲಕ್ಷ್ಯ ವಹಿಸುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದೆ.
ಹೆಚ್.ಡಿ.ಕೋಟೆ ತಾಲ್ಲೂಕಿನಲ್ಲಿ ತಮ್ಮ ವ್ಯಾಪ್ತಿಗೆ ಒಳಪಡುವ ವೃತ್ತಗಳಲ್ಲಿ ಕಾರ್ಯನಿರ್ವಾಹಿಸದೆ ತಾಲ್ಲೂಕು ಕೇಂದ್ರ ಸ್ಥಾನದಲ್ಲಿ ಕುಳಿತು ಗ್ರಾಮಲೆಕ್ಕಾಧಿಕಾರಿಗಳು ಸಾರ್ವಜನಿಕರನ್ನು ಅಲೆದಾಡಿಸುತ್ತಿದ್ದಾರೆ. ಇದನ್ನು ಕಂದಾಯ ಇಲಾಖೆ ಮೇಲಾಧಿಕಾರಿಗಳು ಕಂಡು ಕಾಣದಂತೆ ಕುಳಿತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಸಾರ್ವಜನಿಕರು 30–40 ಕಿಲೋ ಮೀಟರ್ ದೂರದಿಂದ ಹಣ ಖರ್ಚುಮಾಡಿಕೊಂಡು ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜಾತಿಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಇತರೆ ದಾಖಲೆಗಳಿಗೆ ಗ್ರಾಮಲೆಕ್ಕ ಅಧಿಕಾರಿಗಳನ್ನು ಹುಡುಕಿಕೊಂಡು ಕೇಂದ್ರ ಸ್ಥಾನಕ್ಕೆ ಜನರು ಬರುವಂತಹ ಸಮಸ್ಯೆ ಸೃಷ್ಟಿಯಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಇನ್ನಾದರೂ ಸರ್ಕಾರದ ಸುತ್ತೋಲೆ ಪ್ರಕಾರ ಅಧಿಕಾರಿಗಳು ಕಾರ್ಯ ನಿರ್ವಹಿಸುವರೇ ಎನ್ನುವುದನ್ನು ಕಾದುನೋಡಬೇಕಿದೆ.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296