ಕೊರಟಗೆರೆ: ಸ್ಮಶಾನಕ್ಕೆ ಹೋಗುವ ದಾರಿ ಮತ್ತು ಸರ್ಕಾರಿ ಹಳ್ಳ ಒತ್ತುವರಿ ಶೀಘ್ರವೇ ತೆರವು ಕಾರ್ಯಾಚರಣೆ ಕೈಗೊಳ್ಳಬೇಕೆಂದು ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಬಡ ಮುದ್ದಯ್ಯನಪಾಳ್ಯ ಮಜರೇ ಬೋರಯ್ಯನ ಹಟ್ಟಿ ಗ್ರಾಮದ ಗ್ರಾಮಸ್ಥರು ತಹಶೀಲ್ದಾರ್ ಗೆ ಮನವಿ ಸಲ್ಲಿಸಿದ್ದಾರೆ.
ಗ್ರಾಮ ದಾಸರವೇ ನಂಬರ್ 19ರಲ್ಲಿ 20 ಜಮೀನನ್ನು ಸ್ಮಶಾನಕ್ಕೆ ಮೀಸಲಿರಿಸಿದ್ದು, ಸ್ಮಶಾನ ಮತ್ತು ಸ್ಮಶಾನಕ್ಕೆ ಹೋಗುವ ರಸ್ತೆ ಒತ್ತುವರಿ ಆಗಿದ್ದು ಹಾಗೂ ಸರ್ಕಾರಿ ಹಳ್ಳದ ಜಾಗ ಒತ್ತುವರಿ ಆಗಿದ್ದು ಗ್ರಾಮಸ್ಥರಿಗೆ ತೊಂದರೆ ಆಗುತ್ತಿದೆ ಎಂದು ಮನವಿ ಮಾಡಿದ್ದಾರೆ.
ಗ್ರಾಮದ ಬಲಾಢ್ಯರು ಸರ್ಕಾರಿ ಹಳ್ಳದ ಜಾಗವನ್ನು ಒತ್ತುವರಿ ಮಾಡಿ ಮುಳ್ಳು ತಂತಿ ಹಾಕಿ ರೈತರಿಗೆ ಮತ್ತು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿದರು.
ಗ್ರೇಡ್ 2 ತಹಶೀಲ್ದಾರ್ ರಾಮ್ ಪ್ರಸಾದ್ ಮನವಿ ಸ್ವೀಕರಿಸಿ ತಕ್ಷಣವೇ ಕ್ರಮವಹಿಸುತ್ತೇನೆ ಎಂದು ತಿಳಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx