ಮೇರಠ್: ಹಣ ಸುಳಿಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಗ್ರಾಮಸ್ಥರು ಇಬ್ಬರು ಪೊಲೀಸರನ್ನು ಒತ್ತೆಯಾಳುಗಳಾಗಿರಿಸಿಕೊಂಡು ಥಳಿಸಿದ ಘಟನೆ ಪರೀಕ್ಷಿತ್ಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪರೀಕ್ಷಿತ್ ಗಢ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸತ್ಯೇಂದ್ರ ಹಾಗೂ ಪ್ರಶಿಕ್ಷಣಾರ್ಥಿ ಸಬ್ ಇನ್ ಸ್ಪೆಕ್ಟರ್ ಶಿವಂ ಅವರನ್ನು ಗೋವಿಂದಪುರಿ ಗ್ರಾಮಸ್ಥರು ಶನಿವಾರ ರಾತ್ರಿ ಒತ್ತೆಯಾಳುಗಳಾಗಿರಿಸಿಕೊಂಡು ಥಳಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ವಿವಿಧ ಪೊಲೀಸ್ ಠಾಣೆಯ ಆರಕ್ಷಕ ಪಡೆ ಸ್ಥಳಕ್ಕೆ ದೌಡಾಯಿಸಿತು ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ವೇಳೆ ಪೊಲೀಸರೊಂದಿಗೆ ಗ್ರಾಮಸ್ಥರು ವಾಗ್ವಾದ ನಡೆಸಿದ್ದಾರೆ. ಸಬ್ ಇನ್ಸ್ಪೆಕ್ಟರ್ ಸತ್ಯೇಂದ್ರ ಅವರು ಅಂಗಡಿ ಮಾಲೀಕರನ್ನು ಹಣ ಕೊಡುವಂತೆ ಹೆದರಿಸುತ್ತಿದ್ದರು. ಕೊಡದಿದ್ದರೆ ಜೈಲಿಗೆ ಕಳುಹಿಸುವ ಬೆದರಿಕೆಯನ್ನೂ ಒಡ್ಡುತ್ತಿದ್ದರು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಕೊನೆಗೆ ಗ್ರಾಮಸ್ಥರನ್ನು ಸಮಾಧಾನ ಪಡಿಸಿದ ವೃತ್ತ ಪೊಲೀಸ್ ಅಧಿಕಾರಿ ನವಿನಾ ಶುಕ್ಲಾ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿ ಇಬ್ಬರನ್ನು ಗ್ರಾಮಸ್ಥರಿಂದ ಬಿಡಿಸಿದ್ದಾರೆ. ಸದ್ಯ ಘಟನೆ ಸಂಬಂಧ ತನಿಖೆಗೆ ಆದೇಶಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296