ತಿಪಟೂರು: ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಅಧ್ಯಕ್ಷರು ಅವ್ಯವಹಾರದ ವಿರುದ್ಧ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕು ರಂಗಾಪುರ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.
ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು, ಹೊಸಳ್ಳಿ ಗ್ರಾಮದ ಜನಕ್ಕೆ ಕುಡಿಯುವ ನೀರು ಒದಗಿಸುವ ಮೋಟರ್ ಎತ್ತಿದ ವಿಚಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಗ್ರಾಮ ಪಂಚಾಯತಿ ಪಿಡಿಒ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ತರಾಟೆಗೆತ್ತಿಕೊಂಡರು.
ರಂಗಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಪಿಡಿಒ ಹೇಳ್ತಾರೆ, ಆದ್ರೆ ಕೆರಗೋಡಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಕೆರಗೋಡಿ ಗ್ರಾಮಸ್ಥ ಸಂತೋಷ್ ಹೇಳಿಕೆ ನೀಡಿದರು.
ಗ್ರಾಮ ಪಂಚಾಯಿತಿ ಸದಸ್ಯರ ಗಮನಕ್ಕೆ ತರದಂತೆ ಪಿಡಿಒ ಹಾಗೂ ಅಧ್ಯಕ್ಷ ಮೋಟಾರ್ ಎತ್ತಿಸಿದ್ದಾರೆ ಎಂದು ರಂಗಪುರ ಗ್ರಾಮ ಪಂಚಾಯಿತಿ ಪಿಡಿಒ ಶಂಕರ್ ಬೀಳುವ ಹಾಗೂ ಅಧ್ಯಕ್ಷ ವಿಶ್ವನಾಥ್ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಯಾವುದೇ ಕೆಲಸ ಕಾರ್ಯಗಳನ್ನು ಮಾಡುವಾಗ ಗ್ರಾಮ ಪಂಚಾಯಿತಿ ಸದಸ್ಯರ ಗಮನಕ್ಕೆ ತಿಳಿಸುವುದಿಲ್ಲ ಎಂದು ರಂಗಪುರ ಗ್ರಾಮ ಪಂಚಾಯತಿ ಸದಸ್ಯ ಹೊಸಳ್ಳಿ ತ್ರಿವೇಣಿ ಹಾಗೂ ಸದಸ್ಯ ರಂಗಪುರ ಜಯಣ್ಣ ಆರೋಪ ಮಾಡಿದರು.
ಇದೇ ವೇಳೆ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಗ್ರಾಮಸ್ಥರ ಪ್ರಶ್ನೆಗೆ ಉತ್ತರಿಸಲು ಪಿಡಿಒ ಶಂಕರ್ ಬೀಳೂರ ಪರದಾಡಿದರು. ಕುಡಿಯುವ ನೀರು ಓದಗಿಸುತ್ತಿದ್ದ ಮೋಟಾರ್ ಎತ್ತಿದ ಹೊಸಳ್ಳಿ ಗ್ರಾಮದ ಯತೀಶ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದರು.
ಅಧಿಕಾರಿಗಳು ಹಾಗೂ ಸಂಬಂಧಪಟ್ಟವರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಲಾಯಿತು. ಪ್ರತಿಭಟನಾ ಸ್ಥಳಕ್ಕೆ ಎಡಿಇ ಶಿವಕುಮಾರ್ ಭೇಟಿ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4