ನೊಣವಿನಕೆರೆ: ಇಲ್ಲಿನ ಪಿಎಂಶ್ರೀ — ಕೆ ಪಿ ಎಸ್ ಪ್ರಾಥಮಿಕ ಶಾಲೆಯಲ್ಲಿ ಸಂಕ್ರಾಂತಿ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಆವರಣದಲ್ಲಿ ಹಳ್ಳಿಯ ಸೊಗಡನ್ನು ಮರುಸೃಷ್ಟಿಸುವ ಮೂಲಕ ಗ್ರಾಮೀಣ ಸಂಸ್ಕೃತಿಯನ್ನು ಆಚರಿಸಲಾಯಿತು.
ಹಟ್ಟಿಯ ಗೌಡರಾಗಿ ಮಿಂಚಿದ ಮುಖ್ಯಶಿಕ್ಷಕರು:
ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕರಾದ ಸುರೇಶ್ ಅವರು ಉದ್ಘಾಟಿಸಿದರು. ವಿಶೇಷವಾಗಿ ಅವರು ‘ಪಿ ಎಂ ಶ್ರೀ ಹಟ್ಟಿಯ ಗೌಡರಾಗಿ’ ಸಂಕ್ರಾಂತಿ ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಶಾಲಾ ಚಿತ್ರಕಲಾ ಶಿಕ್ಷಕರು ರಚಿಸಿದ ವರ್ಲಿ ಚಿತ್ರಕಲಾಕೃತಿಯನ್ನು ಅನಾವರಣಗೊಳಿಸಲಾಯಿತು. ಈ ಕಲಾಕೃತಿಯಲ್ಲಿ ಹಳ್ಳಿಯ ಜೀವನ ಶೈಲಿ ಮತ್ತು ಸಂಕ್ರಾಂತಿಯ ಸಂಭ್ರಮವನ್ನು ಅದ್ಭುತವಾಗಿ ಚಿತ್ರಿಸಲಾಗಿದ್ದು, ಮುಖ್ಯಶಿಕ್ಷಕರು ಇದನ್ನು ಲೋಕಾರ್ಪಣೆ ಮಾಡಿದರು.
ಹಬ್ಬದ ಪ್ರಯುಕ್ತ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಬಣ್ಣ ಬಣ್ಣದ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ಸಂಭ್ರಮಿಸಿದರು. ಮಕ್ಕಳಿಂದ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು. ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ (SDMC) ಸದಸ್ಯರು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಒಟ್ಟಾರೆಯಾಗಿ ಇಡೀ ಶಾಲೆಯು ಹಬ್ಬದ ಸಡಗರದಲ್ಲಿ ಮಿಂದೆದ್ದಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


