ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ದಳವಾಯಿಹಳ್ಳಿ ಗ್ರಾಮದ ವಿನಯ್ ಕುಮಾರ್ ಎಸ್. ಅವರು ತುಮಕೂರು ವಿಶ್ವವಿದ್ಯಾನಿಲಯದ ಅಖಿಲ ಭಾರತ ವಿಶ್ವವಿದ್ಯಾಲಯದ ದಕ್ಷಿಣ ವಲಯ ಮತ್ತು KSCA 1ನೇ ವಿಭಾಗದ ಕ್ರಿಕೆಟ್ ಆಟಗಾರರಾಗಿದ್ದು, ಇವರ ಕ್ರೀಡಾ ಕ್ಷೇತ್ರದ ಸಾಧನೆಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಆಗಿದ್ದಾರೆ.
ಇವರಿಗೆ ಡಿ.25ರಂದು ಬೆಂಗಳೂರಿನಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭದಲ್ಲಿ ಸನ್ಮಾನಿಸಲು ಕನ್ನಡ ಫಿಲಂ ಚೇಂಬರ್ಸ್ ಕಮಿಟಿಯಿಂದ ಆಹ್ವಾನಿಸಲಾಗಿದೆ ಎಂದು ಕನ್ನಡ ಫಿಲಂ ಚೇಂಬರ್ ಸಮಿತಿ ರಾಜ್ಯಾಧ್ಯಕ್ಷ ಎಂ.ಎಸ್.ರವೀಂದ್ರ ತಿಳಿಸಿದ್ದಾರೆ.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx