ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರ್ಪಡೆಯಾದ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಜುಲಾನಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಈಗಾಗಲೇ ಚುನಾವಣ ಪ್ರಚಾರ ಆರಂಭಿಸಿರುವ ವಿನೇಶ್, ಐಒಎ ಅಧ್ಯಕ್ಷೆ ಪಿ.ಟಿ.ಉಷಾ(PT Usha) ವಿರುದ್ಧ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ ವೇಳೆ ನಾನು(ವಿನೇಶ್) ನಿರ್ಜಲೀಕರಣದಿಂದ ಆಸ್ಪತ್ರೆ ಸೇರಿದ್ದಾಗ ಪಿಟಿ ಉಷಾ ಅವರು ಆರೋಗ್ಯ ವಿಚಾರಿಸುತ್ತಿರುವ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದು ರಾಜಕೀಯ ಉದ್ದೇಶಕ್ಕೋಸ್ಕರ ತೆಗೆದ ಫೋಟೊ ಎಂದು ವಿನೇಶ್ ಹೇಳಿದ್ದಾರೆ.
ಸ್ಥಳೀಯ ಸುದ್ದಿ ವಾಹಿನಿಯೊಂದಿಗಿನ ಸಂದರ್ಶನದಲ್ಲಿ ಮಾತನಾಡಿದ ವಿನೇಶ್, “ನನಗೆ ಪ್ಯಾರಿಸ್‌ನಲ್ಲಿ ಯಾವ ಬೆಂಬಲ ಸಿಕ್ಕಿದೆ ಎಂದು ನನಗೆ ತಿಳಿದಿಲ್ಲ. ಪಿಟಿ ಉಷಾ ಮೇಡಂ ನನ್ನನ್ನು ಅಂದು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದರು. ಈ ವೇಳೆ ಒಂದು ಫೋಟೋ ಕ್ಲಿಕ್ಕಿಸಲಾಯಿತು. ಈ ಫೋಟೊವನ್ನು ಉಷಾ ಮೇಡಂ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಆದರೆ, ಈ ಫೋಟೊದ ಹಿಂದೆ ರಾಜಕೀಯ ನಟನೆ ಇತ್ತು” ಎಂದು ವಿನೇಶ್ ಆರೋಪ ಮಾಡಿದ್ದಾರೆ.
ಅಂದು ವಿನೇಶ್‌ರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ್ದ ಪಿ.ಟಿ. ಉಷಾ, ವಿನೇಶ್ ಗೆ ಭಾರತೀಯ ಒಲಿಂಪಿಕ್ ಸಂಸ್ಥೆ, ಭಾರತ ಸರ್ಕಾರ ಮತ್ತು ದೇಶದಿಂದ ಸಂಪೂರ್ಣ ಬೆಂಬಲ ಸಿಗಲಿದೆ. ಜತೆಗೆ ಎಲ್ಲಾ ರೀತಿಯ ವೈದ್ಯಕೀಯ ಮತ್ತು ಭಾವನಾತ್ಮಕ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದರು. ಆದರೆ ಇದೀಗ ವಿನೇಶ್ ಅವರು ಪಿ.ಟಿ. ಉಷಾ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಪಿ.ಟಿ. ಉಷಾ ಬಿಜೆಪಿ ಪಕ್ಷದ ರಾಜ್ಯಸಭಾ ಸದಸ್ಯೆಯಾಗಿದ್ದಾರೆ. ಈ ಕಾರಣಕ್ಕೆ ವಿನೇಶ್ ಅವರು ಪಿ.ಟಿ. ಉಷಾ ವಿರುದ್ಧ ಆರೋಪ ಮಾಡಿದಂತಿದೆ.
THIS IS HUGE !!
Vinesh Phogat says she got ZERO SUPPORT from PT Usha, BJP nominated MP & Prez of Indian Olympics association.
She came to meet her, Clicked a picture and posted on Social Media. pic.twitter.com/8yFTX6WbTZ
— Mahua Moitra Fans (@MahuaMoitraFans) September 10, 2024
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q