ಬೀದರ್: ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ದ ನೂತನ ಅಧ್ಯಕ್ಷರಾಗಿ ವಿನೋದ ಅಪ್ಪೆ ಅವರನ್ನು ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ರ ಅನ್ವಯ, ಈ ಹಿಂದೆ ಬುಡಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಬಸವರಾಜ ಜಾಬಶೆಟ್ಟಿ ಅವರ ಸ್ಥಾನಕ್ಕೆ ವಿನೋದ ಅಪ್ಪೆ ಅವರನ್ನು ನೇಮಿಸಲಾಗಿದೆ. ಈ ಆದೇಶವು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.
ಈ ಕುರಿತು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲತಾ ಕೆ. ಅವರು ಸೆಪ್ಟೆಂಬರ್ 11 ರಂದು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.
ವರದಿ: ಅರವಿಂದ ಮಲ್ಲೀಗೆ, ಬೀದರ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
