ತುಮಕೂರು: ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.
ಪ್ರಜಾಪ್ರತಿನಿಧಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಡಿ.ಕೆ.ಸುರೇಶ್ ವಿರುದ್ಧ ವೈಯಕ್ತಕವಾಗಿ ನಿಂದನೆ ಮಾಡಿದ ಆರೋಪದಲ್ಲಿ, ಡಿ.ಕೆ ಸುರೇಶ್ ಕೊತ್ವಾಲ್ ರಾಮಚಂದ್ರನ ಗರಡಿಯಿಂದ ಬಂದವರು ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಅವರು ದೇಶ, ರಾಜ್ಯ ಉಳಿಸುತ್ತಾರಾ..? ಹಣದ ದಾಹಕ್ಕೆ ಏನು ಬೇಕಾದರು ಮಾಡುತ್ತಾರೆಂದು ಡಿ.ಕೆ.ಸುರೇಶ್ ವಿರುದ್ಧ ಕುಮಾರಸ್ವಾಮಿ ಟೀಕಿಸಿದ್ದರು.
ಏಪ್ರಿಲ್ 13ರಂದು ಗುಬ್ಬಿಯಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಮತ ಯಾಚನೆ ವೇಳೆ ನಡೆದ ಪ್ರಚಾರ ಸಂದರ್ಭದಲ್ಲಿ ಮಾತನಾಡಿದ್ದ ಕುಮಾರಸ್ವಾಮಿ ಡಿ.ಕೆ.ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಈ ಸಂಬಂಧ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಎಸ್.ಎಫ್.ಟಿ ಮಹೇಶ್ ದೂರು ನೀಡಿದ್ದರು. ನ್ಯಾಯಾಲಯದ ಆದೇಶದ ಮೇರೆಗೆ ಎಫ್.ಐ.ಆರ್ ದಾಖಲು ಮಾಡಲಾಗಿದೆ.
ಬೆಂಗಳೂರಿನ ಘನ 42ನೇ ಅಡಿಷನಲ್ ಸಿಎಂಎಂ ನ್ಯಾಯಾಲಯ ಆದೇಶ ನೀಡಿತ್ತು. ಇದೇ 19–04–24ರಂದು ಎಫ್.ಐ.ಆರ್ ದಾಖಲು ಆಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296