nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ

    June 5, 2026

    ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ

    June 5, 2026
    Facebook Twitter Instagram
    ಟ್ರೆಂಡಿಂಗ್
    • ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    • ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ
    • ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ
    • ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ
    • ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಡುವ ಮೂಲಕ ಜಾಗೃತಿ ಕಾರ್ಯಕ್ರಮ
    • ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!
    • ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ
    • ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆ ಅವಾಂತರ, ಕಾರ್ಯೋನ್ಮುಖವಾದ ಐಟಿ ದಿಗ್ಗಜ ಸಂಸ್ಥೆ ವಿಪ್ರೋ: ಒತ್ತುವರಿ ತೆರವುಗೊಳಿಸುವ ಸ್ವಯಂ ಕಾರ್ಯಾಚರಣೆ
    ರಾಷ್ಟ್ರೀಯ ಸುದ್ದಿ September 20, 2022

    ಮಳೆ ಅವಾಂತರ, ಕಾರ್ಯೋನ್ಮುಖವಾದ ಐಟಿ ದಿಗ್ಗಜ ಸಂಸ್ಥೆ ವಿಪ್ರೋ: ಒತ್ತುವರಿ ತೆರವುಗೊಳಿಸುವ ಸ್ವಯಂ ಕಾರ್ಯಾಚರಣೆ

    By adminSeptember 20, 2022No Comments2 Mins Read
    wipro

    ಬಿಬಿಎಂಪಿ ಅಧಿಕಾರಿಗಳು ಮಳೆಪೀಡಿತ ಪ್ರದೇಶಗಳಲ್ಲಿ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ನಡೆಸಲು ಸಿದ್ಧತೆ ನಡೆಸುತ್ತಿದ್ದಂತೆ, ಐಟಿ ದಿಗ್ಗಜ ಸಂಸ್ಥೆ ವಿಪ್ರೋ ಸೋಮವಾರದಂದು ಸ್ವತಃ ಜೆಸಿಬಿಗಳು ಹಾಗೂ ಇತರೆ ಯಂತ್ರಗಳನ್ನು ಬಳಸಿಕೊಂಡು ಸಂಸ್ಥೆಯ ಬಳಿಯಿರುವ ರಾಜಾಕಾಲುವೆಯ ಮೇಲೆ ಹೊದಿಸಲಾಗಿದ್ದ ಕಾಂಕ್ರೀಟ್ ಸ್ಲ್ಯಾಬ್‌ಗಳನ್ನು ತೆರವುಗೊಳಿಸಲು ಆರಂಭಿಸಿತು.

    ಬಿಬಿಎಂಪಿ ನೀಡಿದ ಮಾಹಿತಿಯ ಪ್ರಕಾರ, ವಿಪ್ರೋ ಸಂಸ್ಥೆ ಕಚೇರಿ ಬಳಿಯಿರುವ ರಾಜಾಕಾಲುವೆ ಮೇಲೆ ೨.೪ ಮೀಟರ್‌ ಗಳಷ್ಟು ಅಗಲದ ಕಾಂಕ್ರೀಟ್ ಸ್ಲ್ಯಾಬ್ ಒಂದನ್ನು ನಿರ್ಮಾಣ ಮಾಡಿಕೊಂಡಿದೆ. ಇದು ಕಂಪನಿಯ ಆವರಣದೊಳಗೆ ಹರಿಯುವ ರಾಜಾಕಾಲುವೆಯನ್ನು ಒತ್ತುವರಿ ಮಾಡಿಕೊಳ್ಳುವಂತೆ ಇಲ್ಲ ಹಾಗೂ ಅಗಲವನ್ನೂ ಸಹ ಕಡಿಮೆಗೊಳಿಸುವಂತೆ ಇಲ್ಲ.


    Provided by
    Provided by

    “ಈ ಸ್ಲ್ಯಾಬ್‌ ನ ಒಂದು ಭಾಗವನ್ನು ತೆರವುಗೊಳಿಸಲಾಯಿತು. ವಿಪ್ರೋ ಸಂಸ್ಥೆ ನಿರ್ಮಾಣ ಮಾಡಿಕೊಂಡಿರುವ ಖಾಯಂ ಕಟ್ಟಡಗಳ ಮೇಲೆ ಹಾಗೂ ರಾಜಕಾಲುವೆ ಪಕ್ಕದಲ್ಲೇ ಇರುವ ಸಲಾರ್‌ಪುರಿಯಾದ ಕಟ್ಟಡಗಳಿಗೆ ಯಾವುದೇ ರೀತಿಯ ಪರಿಣಾಮ ಉಂಟಾಗದಿರಲಿ ಎಂಬ ಉದ್ದೇಶದಿಂದ ಈ ಕೆಲಸವನ್ನು ಮಧ್ಯದಲ್ಲಿಯೇ ನಿಲ್ಲಿಸಲಾಯಿತು. ಉಳಿದ ಸ್ಲ್ಯಾಬ್‌ಗಳನ್ನು ಮಂಗಳವಾರ ಜೆಸಿಬಿ ಬದಲಿಗೆ ಗ್ಯಾಸ್ ಕಟ್ಟರ್‌ ಗಳನ್ನು ಬಳಸಿ ತೆರವುಗೊಳಿಸಲಾಗುವುದು,” ಎಂದು ಬಿಬಿಎಂಪಿಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

    ಸರ್ಜಾಪುರ ರಸ್ತೆಯಲ್ಲಿರುವ ವಿಪ್ರೋದ ಕ್ಯಾಂಪಸ್, ಇತ್ತೀಚೆಗೆ ಸುರಿದಂತಹ ಭಾರಿ ಮಳೆಯಿಂದಾಗಿ, ಹಾಲನಾಯಕನಹಳ್ಳಿ ಕೆರೆ ಹಾಗೂ ಸೌಲ್ ಕೆರೆ ನಡುವೆ ಇರುವಂತಹ ಈ ಬಡಾವಣೆಯೊಳಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾದಂತಹ ಇತರೆ ಹಲವು ಕಚೇರಿಗಳು ಹಾಗೂ ಮನೆಗಳ ಪೈಕಿ ಸೇರಿದೆ.

    ಸೋಮವಾರ, ಬಿಬಿಎಂಪಿ ಗ್ರೀನ್‌ ವುಡ್ ರೆಸಿಡೆನ್ಸಿ ಬಳಿ ಇರುವ ಕಾಲುವೆಯನ್ನು ಮುಚ್ಚಿದಂತ್ತಿದ್ದ ಮೇಲ್ಭಾಗದ ಸಿಮೆಂಟ್ ಸ್ಲ್ಯಾಬ್ ಅನ್ನು ತೆರವುಗೊಳಿಸಿತು. ಸಲಾರ್‌ ಪುರಿಯಾ ಸಂಸ್ಥೆಯ ಆವರಣದಲ್ಲೂ ಸಹ, ಅಧಿಕಾರಿಗಳು ತಿಳಿಸಿದಂತೆ, ಆವರಣದೊಳಗಿನ ಕಾಲುವೆ ಕಾಮಗಾರಿ ಪೂರ್ಣಗೊಂಡ ನಂತರ ಇದೇ ಕ್ರಮವನ್ನು ಕೈಗೊಳ್ಳಲಾಗಿದೆಯಂತೆ.

    ಈ ಸಂಬಂಧ ಮಾತನಾಡಿದ ವಿಪ್ರೋದ ವಕ್ತಾರರು; “ವಿಪ್ರೋ ಸಂಸ್ಥೆ ತನ್ನ ಕಚೇರಿ ಇರುವ ಪ್ರದೇಶ ವ್ಯಾಪ್ತಿಯಲ್ಲಿನ ಪರಿಸರ ವ್ಯವಸ್ಥೆಯನ್ನು ಬೆಂಬಲಿಸಲು ಬದ್ಧವಾಗಿದೆ. ಸಂಬಂಧಪಟ್ಟ ಪ್ರಾಧಿಕಾರಗಳು ಮಂಜೂರು ಮಾಡಿದಂತಹ ಪ್ಲಾನ್ ಪ್ರಕಾರವೇ ನಿರ್ಮಿಸಲಾಗಿರುವ, ನಮ್ಮ ದೊಡ್ಡಕನ್ನೇಹಳ್ಳೀ ಆವರಣದಿಂದ ಹಾದು ಹೋಗುವ ರಾಜಾಕಾಲುವೆಯ ಸಾಮರ್ಥ್ಯವನ್ನು ವೃದ್ಧಿಸಲು ಬಿಬಿಎಂಪಿ ಜತೆಗೆ ನಾವು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ,” ಎಂದು ವಿವರಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ರಾಘವೇಂದ್ರ ಅಡಿಗ ಎಚ್ಚೆನ್. ಭಾರತದ ಪ್ರಮುಖ ಮನರಂಜನೆ ಹಾಗೂ ತಂತ್ರಜ್ಞಾನ ಸಂಸ್ಥೆ ‘ಜೀ’, ದೇಶದ ಮೊದಲ ಬಹುಭಾಷಾ ಕಿರುಚಿತ್ರ ಸ್ಪರ್ಧೆ…

    ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ

    June 5, 2026

    ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ

    June 5, 2026

    ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ

    June 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.