nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರಿನಲ್ಲಿ ಚಿರತೆ ಸುಟ್ಟು ಹಾಕಿದ ಪ್ರಕರಣ: ಮೂವರ ಬಂಧನ

    August 22, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರಿನಲ್ಲಿ ಚಿರತೆ ಸುಟ್ಟು ಹಾಕಿದ ಪ್ರಕರಣ: ಮೂವರ ಬಂಧನ
    • ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ
    • ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ
    • ತುಮಕೂರು: ಗೊಲನ ಎಂಟರ್ ಪ್ರೈಸಸ್ ನಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ
    • ತುಮಕೂರು: ಸೆ.4ರಂದು ಶ್ರೀ ಕೃಷ್ಣ ಜಯಂತಿ: ಮೆರವಣಿಗೆ ನಡೆಸಲು ಎಡಿಸಿ ಸೂಚನೆ
    • ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಹೇಯ ಕೃತ್ಯ: ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ
    • ತುರುವೇಕೆರೆ: ಬ್ಯಾಲಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ
    • ತುಮಕೂರು: ಆ.23 ರಿಂದ ಪರಿಸರ ಜಾಗೃತಿ ಕುರಿತು ಮೂರು ದಿನಗಳ ಕಾರ್ಯಾಗಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿರಾಟ್ ರಾಮಾಯಣ ದೇವಾಲಯ ನಿರ್ಮಾಣಕ್ಕೆ 2.5 ಕೋಟಿ ಮೌಲ್ಯದ ಭೂಮಿ ದಾನ ನೀಡಿದ ಮುಸ್ಲಿಂ ಕುಟುಂಬ
    ರಾಷ್ಟ್ರೀಯ ಸುದ್ದಿ March 23, 2022

    ವಿರಾಟ್ ರಾಮಾಯಣ ದೇವಾಲಯ ನಿರ್ಮಾಣಕ್ಕೆ 2.5 ಕೋಟಿ ಮೌಲ್ಯದ ಭೂಮಿ ದಾನ ನೀಡಿದ ಮುಸ್ಲಿಂ ಕುಟುಂಬ

    By adminMarch 23, 2022No Comments2 Mins Read
    virat ramayana

    ಪಾಟ್ನಾ: ಬಿಹಾರದ ಮುಸ್ಲಿಂ ಕುಟುಂಬವೊಂದು (Muslim Family) ಕೋಮು ಸೌಹಾರ್ದತೆಗೆ ಮಾದರಿಯಾಗಿದೆ. ಪೂರ್ವ ಚಂಪಾರಣ್ ಜಿಲ್ಲೆಯ ಕೈತ್ವಾಲಿಯಾ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ವಿಶ್ವದ ಅತಿ ದೊಡ್ಡ ಹಿಂದೂ ಮಂದಿರ ವಿರಾಟ್ ರಾಮಾಯಣ ದೇವಾಲಯಕ್ಕೆ 2.5 ಕೋಟಿ ರೂ. ಮೌಲ್ಯದ ಜಮೀನನ್ನು ದಾನ ಮಾಡಿದೆ (Virat Ramayan Mandir).

    ದೇವಸ್ಥಾನಕ್ಕೆ ಭೂಮಿ ದಾನ ಮಾಡಿದ ಮುಸ್ಲಿಂ ಕುಟುಂಬ:

    ಗುವಾಹಟಿಯಲ್ಲಿ ವಾಸಿಸುತ್ತಿರುವ ಪೂರ್ವ ಚಂಪಾರಣ್‌ನ ಉದ್ಯಮಿ ಇಶ್ತಿಯಾಕ್ ಅಹ್ಮದ್ ಖಾನ್ ಅವರು, ಈ ಭೂಮಿಯನ್ನು ದಾನ ಮಾಡಿದ್ದಾರೆ ಎಂದು ಮಹಾವೀರ ಮಂದಿರ ಟ್ರಸ್ಟ್‌ನ ಮುಖ್ಯಸ್ಥ ಆಚಾರ್ಯ ಕಿಶೋರ್ ಕುನಾಲ್ ( Kishore Kunal) ತಿಳಿಸಿದ್ದಾರೆ. ದೇವಸ್ಥಾನ ನಿರ್ಮಾಣಕ್ಕಾಗಿ ಭೂಮಿ ದಾನಕ್ಕೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ವ ಚಂಪಾರಣ್‌ನ ಕೇಸರಿಯಾ ಉಪವಿಭಾಗದ ರಿಜಿಸ್ಟ್ರಾರ್ ಕಚೇರಿಯಲ್ಲಿ ಇತ್ತೀಚೆಗೆ ಪೂರ್ಣಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ (Virat Ramayan Mandir). ಎರಡು ಸಮುದಾಯಗಳ ನಡುವಿನ ಸಾಮಾಜಿಕ ಸಾಮರಸ್ಯದ ಉದಾಹರಣೆ :
    ಇಶ್ತಿಯಾಕ್ ಅಹ್ಮದ್ ಖಾನ್ ಮತ್ತು ಅವರ ಕುಟುಂಬದವರ ಈ ದೇಣಿಗೆಯು ಎರಡು ಸಮುದಾಯಗಳ ನಡುವಿನ ಸಾಮಾಜಿಕ ಸಾಮರಸ್ಯ ಮತ್ತು ಸಹೋದರತ್ವಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ಆಚಾರ್ಯ ಕಿಶೋರ್ ಕುನಾಲ್ ಹೇಳಿದ್ದಾರೆ. ಮುಸ್ಲಿಮರ ಸಹಾಯವಿಲ್ಲದೇ ಈ ಮಹತ್ವಾಕಾಂಕ್ಷೆಯ ಯೋಜನೆ ಸಾಕಾರಗೊಳ್ಳುವುದು ಕಷ್ಟಸಾಧ್ಯ ಎಂದಿದ್ದಾರೆ .

    ಮಂದಿರ ನಿರ್ಮಾಣಕ್ಕೆ 125 ಎಕರೆ ಭೂಮಿ :

    ಈ ದೇವಾಲಯ ನಿರ್ಮಾಣಕ್ಕಾಗಿ ಮಹಾವೀರ ಮಂದಿರ ಟ್ರಸ್ಟ್ ಇಲ್ಲಿಯವರೆಗೆ 125 ಎಕರೆ ಭೂಮಿಯನ್ನು ಪಡೆದುಕೊಂಡಿದೆ. ಟ್ರಸ್ಟ್‌ಗೆ ಶೀಘ್ರದಲ್ಲೇ ಈ ಪ್ರದೇಶದಲ್ಲಿ ಇನ್ನೂ 25 ಎಕರೆ ಭೂಮಿ ಸಿಗಲಿದೆ ಎಂದು ಕಿಶೋರ್ ಕುನಾಲ್ ಹೇಳಿದ್ದಾರೆ.ವಿರಾಟ್ ರಾಮಾಯಣ ದೇವಾಲಯವು (Virat Ramayana Mandir) 215 ಅಡಿ ಎತ್ತರವಿರುವ ಕಾಂಬೋಡಿಯಾದ ವಿಶ್ವಪ್ರಸಿದ್ಧ 12 ನೇ ಶತಮಾನದ ಅಂಕೋರ್ ವಾಟ್ ಸಂಕೀರ್ಣಕ್ಕಿಂತ ಎತ್ತರವಾಗಿರಲಿದೆ ಎಂದು ಹೇಳಲಾಗುತ್ತದೆ. ಪೂರ್ವ ಚಂಪಾರಣ್‌ ನ ಸಂಕೀರ್ಣವು ಎತ್ತರದ ಶಿಖರಗಳೊಂದಿಗೆ 18 ದೇವಾಲಯಗಳನ್ನು ಹೊಂದಿರುತ್ತದೆ.

    ಅದರ ಶಿವ ದೇವಾಲಯವು (Shiva Temple) ವಿಶ್ವದ ಅತಿದೊಡ್ಡ ಶಿವಲಿಂಗವನ್ನು ಹೊಂದಿರುತ್ತದೆ ಎನ್ನಲಾಗಿದೆ. ಈ ಮಂದಿರದ ಒಟ್ಟು ನಿರ್ಮಾಣ ವೆಚ್ಚ ಸುಮಾರು 500 ಕೋಟಿ ಎಂದು ಅಂದಾಜಿಸಲಾಗಿದೆ. ದೆಹಲಿಯ ನೂತನ ಸಂಸತ್ ಭವನ ನಿರ್ಮಾಣದಲ್ಲಿ ತೊಡಗಿರುವ ತಜ್ಞರಿಂದ ಟ್ರಸ್ಟ್ ಶೀಘ್ರದಲ್ಲೇ ಈ ಬಗ್ಗೆ ಸಲಹೆ ಪಡೆಯಲಿದೆ.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರಿನಲ್ಲಿ ಚಿರತೆ ಸುಟ್ಟು ಹಾಕಿದ ಪ್ರಕರಣ: ಮೂವರ ಬಂಧನ

    August 22, 2026

    ತುಮಕೂರು ತಾಲೂಕಿನ ಗೌರಗೊಂಡನಹಳ್ಳಿ ಗೇಟ್ ಬಳಿ, ಉರುಳಿಗೆ ಸಿಲುಕಿ ಸಾವನ್ನಪ್ಪಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡದೆ ಗ್ರಾಮಸ್ಥರೇ ಸುಟ್ಟು ಹಾಕಿದ…

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    ತುಮಕೂರು: ಗೊಲನ ಎಂಟರ್ ಪ್ರೈಸಸ್ ನಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ

    August 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.