ದಾವಣಗೆರೆ: ಭ್ರಷ್ಟಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಬೇಲ್ ಸಿಕ್ಕ ಬಳಿಕ ಯುದ್ಧ ಗೆದ್ದು ಬಂದಂತೆ ಪೋಸ್ ನೀಡಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ, ಭ್ರಷ್ಟಾಚಾರ ಪ್ರಕರಣದಲ್ಲಿ ಬೇಲ್ ಸಿಕ್ಕಿದ ಬಳಿಕ ಯುದ್ಧವನ್ನೇ ಗೆದ್ದು ಬಂದಂತೆ ಅದ್ದೂರಿಯಾಗಿ ಎಂಟ್ರಿ ಕೊಟ್ಟಿದ್ದಾರೆ.
ತಲೆಮರೆಸಿಕೊಂಡಿದ್ದ ತಮ್ಮ ನಾಯಕ ಬರುತ್ತಿದ್ದಂತೆಯೇ ಮಾಡಳ್ ಅವರ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.
ಜಾಮೀನು ಆದೇಶ ತಲುಪಿದ 48 ಗಂಟೆಗಳ ಒಳಗಾಗಿ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ಅವರಿಗೆ ಸೂಚಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


