ಕೊರಟಗೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕೊರಟಗೆರೆ ತಾಲ್ಲೂಕಿನ ವೆಂಗಳಮ್ಮನಹಳ್ಳಿಯಲ್ಲಿ ರಸ್ತೆ ಬದಿಯಲ್ಲಿ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಎಲೆರಾಂಪುರ ಮಠದ ಶ್ರೀ ಹನುಮಂತನಾಥ ಸ್ವಾಮಿಗಳು, ಕಾಂಗ್ರೆಸ್ ಪಕ್ಷದ ವಕ್ತಾರರಾದ ಮುರಳೀಧರ ಹಾಲಪ್ಪ, ಶ್ರೀರಾಮ ಸೇವಾ ಟ್ರಸ್ಟ್ ಮುಖ್ಯಸ್ಥರು, ವಲಯ ಅರಣ್ಯಾಧಿಕಾರಿ ಸುರೇಶ್ ಹಾಜರಿದ್ದರು.
ಬೀಜ ಬಿತ್ತನೆ ಕಾರ್ಯಕ್ರಮವನ್ನು ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಗೊಂದಿಹಳ್ಳಿ ಗ್ರಾಮದ ಅರಣ್ಯ ಸಮಿತಿಯ ಸಹಕಾರದಿಂದ ಹೀರೆಬೆಟ್ಟ ರಕ್ಷಿತ ಅರಣ್ಯ ಪ್ರದೇಶದಲ್ಲಿ ವಿವಿಧ ಜಾತಿಯ ಬೀಜಗಳನ್ನು ಬಿತ್ತನೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಗೊಂದಿಹಳ್ಳಿ ರಂಗರಾಜ್, ಅರಣ್ಯಾಧಿಕಾರಿ ನಾಗರಾಜ್, ಗ್ರಾಮಸ್ಥರು, ಅರಣ್ಯ ಸಿಬ್ಬಂದಿ ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5