ತುರುವೇಕೆರೆ: ಪಟ್ಟಣದಲ್ಲಿರುವ ತಾಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ತಾಲೂಕಿನ ಹೆಸರಾಂತ ಪ್ರಿಯ ಆಂಗ್ಲ ಮಾಧ್ಯಮ ಶಾಲೆ, ವತಿಯಿಂದ ವಿಶ್ವ ವೈದ್ಯರ ದಿನವನ್ನು ಆಚರಣೆ ಮಾಡಲಾಯಿತು.
ಶಾಲಾ ಮಕ್ಕಳಿಗೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯಗಳು ಯಂತ್ರೋಪಕರಣಗಳು ವಿವಿಧ ರೋಗಗಳ ವೈದ್ಯರುಗಳನ್ನು ಪರಿಚಯ ಮಾಡಿಕೊಳ್ಳಲಾಯಿತು ಮತ್ತು ಆಕ್ಸಿಜನ್ ಪ್ಲಾಂಟ್ ವೀಕ್ಷಿಸಲು ಅವಕಾಶ ಮಾಡಿಕೊಡಲಾಯಿತು. ನಂತರ ಶಾಲಾ ಮಕ್ಕಳಿಗೆ ಕೆಕ್ ವಿತರಿಸಲಾಯಿತು
ಇದೇ ಸಂದರ್ಭದಲ್ಲಿ ತುರುವೇಕೆರೆ ಸಾರ್ವಜನಿಕ ಆಸ್ಪತ್ರೆಯ ವೈದ್ಯರುಗಳಾದ ಡಾ.ಮುರುಳಿ, ಡಾ.ಮಧುಕರ್ ಹಾಗೂ ಭಾಸ್ಕರ್ ರವರನ್ನು ಪ್ರಿಯಾ ಆಂಗ್ಲ ಶಾಲೆಯ ಆಡಳಿತ ಮಂಡಳಿಯಿಂದ ಸನ್ಮಾನಿಸಲಾಯಿತು
ಈ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಹರಿಪ್ರಸಾದ್, ಡಾ. ಸೌಮ್ಯ, ಡಾ.ನವೀನ್ ಹಾಗೂ ಪ್ರಿಯಾ ಆಂಗ್ಲ ಶಾಲೆಯ ಶಿಕ್ಷಕ ವೃಂದ ಹಾಜರಿದ್ದರು. ವೈದ್ಯರು, ವಿದ್ಯಾರ್ಥಿಗಳು ಹಾಜರಿದ್ದರು.
ವರದಿ: ಸುರೇಶ್ ಬಾಬು, ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz