ರಾಯಚೂರು: ಆಯುಧ ಪೂಜೆ ಹಿನ್ನೆಲೆಯಲ್ಲಿ ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ್, ಡಬಲ್ ಬ್ಯಾರೆಲ್ ಗನ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ವೀಡಿಯೊ ವೈರಲ್ ಆಗಿದ್ದು, ಜನಪ್ರತಿನಿಧಿಯಾಗಿದ್ದುಕೊಂಡು ಈ ರೀತಿಯ ವರ್ತನೆ ಮಾಡಿರೋದು ವಿವಾದಕ್ಕೆ ಕಾರಣವಾಗಿದೆ.
ಆಯುಧ ಪೂಜೆ ಸಂದರ್ಭದಲ್ಲಿ ಜನರು ವಾಹನಗಳು ಹಾಗೂ ತಮ್ಮ ಕೆಲಸ ಕಾರ್ಯಗಳ ಪರಿಕರಗಳಿಗೆ ಪೂಜೆ ಸಲ್ಲಿಸುತ್ತಿದ್ದರು. ಆದರೆ ಇದೀಗ ಮಾರಕಾಸ್ತ್ರಗಳಿಗೆ ಪೂಜೆ ಸಲ್ಲಿಸುವ ವಿವಾದಿತ ಘಟನೆಗಳು ನಡೆಯುತ್ತಿದ್ದು, ಸಾಮಾಜಿಕ ಜವಾಬ್ದಾರಿಯನ್ನು ಪಾಲಿಸಬೇಕಿದ್ದ ಶಾಸಕ ಶಿವನಗೌಡ ನಾಯಕ್ ನಾಡ ಬಂದೂಕಿನಿಂದ ಗುಂಡು ಹಾರಿಸಿದ್ದಾರೆ.
2—3 ಬಾರಿ ಶಿವನಗೌಡ ನಾಯಕ್ ಗುಂಡು ಹಾರಿಸುತ್ತಿರುವುದು ಕಂಡು ಬಂದಿದೆ. ತಮ್ಮ ಅರಕೇರಾದ ಮನೆಯಲ್ಲಿ ಗುಂಡು ಹಾರಿಸಿ, ಆಯುಧ ಪೂಜೆ ಆಚರಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.
ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


