ಕ್ರಾಂತಿ ಸಿನಿಮಾದ ಪ್ರಚಾರದ ವೇಳೆ ನಟಿ ರಚಿತಾ ರಾಮ್ ಅವರು ನೀಡಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ರಚಿತಾ ರಾಮ್ ವಿರುದ್ಧ ಮೂಲನಿವಾಸಿ ಅಂಬೇಡ್ಕರ್ ಸಂಘದ ಮುಖಂಡರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರಿಗೆ ದೂರು ನೀಡಿದ್ದಾರೆ.
ಕ್ರಾಂತಿ ಸಿನಿಮಾದ ಪ್ರಚಾರದ ವೇಳೆ ಮಾತನಾಡಿದ್ದ ರಚಿತಾ ರಾಮ್, ಪ್ರತೀ ವರ್ಷ ಜನವರಿ 26ಕ್ಕೆ ಗಣರಾಜ್ಯೋತ್ಸವ ಆಚರಿಸುತ್ತಿದ್ದೀರಿ. ಆದರೆ ಈ ಬಾರಿ ಗಣರಾಜ್ಯೋತ್ಸವ ಮರೆತು ಕ್ರಾಂತಿಯೋತ್ಸವ ಮಾಡಿ ಎಂದು ಕರೆ ನೀಡಿದ್ದರು.
ಗಣ ರಾಜ್ಯೋತ್ಸವ ಅನ್ನೋದು ಇಡೀ ದೇಶವೇ ಹೆಮ್ಮೆಪಡುವ ದಿನ ಆದರೆ, ಇದರ ಮಹತ್ವ ತಿಳಿಯದ ನಟಿ ಈ ರೀತಿಯ ಹೇಳಿಕೆ ನೀಡಿರುವುದು ಸರಿಯಲ್ಲ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕಬೇಕು, ಕ್ರಾಂತಿ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು ಎಂದು ಎಂದು ಮೂಲನಿವಾಸಿ ಅಂಬೇಡ್ಕರ್ ಸಂಘ ಆಕ್ರೋಶ ವ್ಯಕ್ತಪಡಿಸಿದೆ.
ವಿವಿಧಡೆಗಳಲ್ಲಿ ರಚಿತಾ ರಾಮ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸಾರ್ವಜನಿಕರು ದೂರು ದಾಖಲಿಸಲು ಮುಂದಾಗಿದ್ದು, ಮಂಡ್ಯ, ಮೈಸೂರಿನಲ್ಲೂ ದೂರು ದಾಖಲಾಗಿರುವ ಬಗ್ಗೆ ಮಾಹಿತಿ ದೊರಕಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


