ನವದೆಹಲಿ: ರೈತರ ನಿರಂತರ ಹೋರಾಟದ ಬಳಿಕ ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಾಗಿ ಕೊನೆಗೂ ಪ್ರಧಾನಿ ಮೋದಿ ಘೋಷಿಸಿದ್ದು, ರೈತರ ತೀವ್ರ ಹೋರಾಟಕ್ಕೆ ಸರ್ಕಾರ ಅನಿವಾರ್ಯವಾಗಿ ತಲೆ ಬಾಗಿದೆ.
ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಲು ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುತ್ತಿದ್ದೇವೆ.ಇದೇ ತಿಂಗಳು ಸಂಸತ್ತಿನಲ್ಲಿ ಈ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಇನ್ನೂ ಕೃಷಿ ಕಾಯ್ದೆಗಳ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಲುಕೇಂದ್ರ ಹಾಗೂ ರಾಜ್ಯ ಸರ್ಕಾರ, ರೈತರು ಮತ್ತು ಕೃಷಿ ತಜ್ಞರ ಸಮಿತಿಯನ್ನು ರಚಿಸುತ್ತೇವೆ ಎಂದು ಪ್ರಧಾನಿ ಇದೇ ಸಂದರ್ಭದಲ್ಲಿ ತಿಳಿಸಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700