ಸಾಮಾಜಿಕ ಜಾಲತಾಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೆಸರಿನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದವರ ವಿರುದ್ಧ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸತೀಶ್ ಜಾರಕಿಹೊಳಿ ಹೆಸರಿನಲ್ಲಿ ರಾಮ ಮಂದಿರ ಹೋರಾಟದಲ್ಲಿ ಸತ್ತ ಹೆಚ್ಚಿನವರು ಓಬಿಸಿಗಳು, ಒಬ್ಬನೇ ಒಬ್ಬ ಬ್ರಾಹ್ಮಣ ಸಾಯಲಿಲ್ಲ. ಆದರೆ, ಈಗ ಮಂದಿರದ ಟ್ರಸ್ಟ್‌ನ ಪದಾಧಿಕಾರಿಗಳೆಲ್ಲ ಬ್ರಾಹ್ಮಣರು, ಒಬ್ಬನು ಓಬಿಸಿ ಇಲ್ಲ ಎಂದು ಕೀಡಿಗೇಡಿಗಳು ಪೋಸ್ಟ್ ಮಾಡಿದ್ದಾರೆ.
ಪೋಸ್ಟ್ ಮಾಡಿದವರ ಕುರಿತು ಸೂಕ್ತ ತನಿಖೆ ನಡೆಸಬೇಕು ಅಂತಾ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ರಾಜ್ಯಾಧ್ಯಕ್ಷ ವಿಜಯ ತಳವಾರ ಬೆಳಗಾವಿ ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇದು ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಕೆಡಿಸಲು ಹುನ್ನಾರ ಮಾಡಲಾಗಿದೆ ಎಂದು ಅವರ ಅಭಿಮಾನಿಗಳು ಕಿಡಿಕಾರಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


