ಹೆಚ್.ಡಿ.ಕೋಟೆ: ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಬಗೆಹರಿಸಲು ಒತ್ತಾಯಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಯಿತು.
ಪ್ರತಿಭಟನೆ ಮೆರವಣಿಗೆ ಪಟ್ಟಣದ ಗದ್ದಿಗೆ ವೃತ್ತದಿಂದ ಹುಣಸೂರು–ಬೇಗೂರು ರಸ್ತೆಯಲ್ಲಿ ಸಾಗಿ ನಂತರ ತಾಲ್ಲೂಕು ಆಡಳಿತ ಸೌಧದ ಎದುರು ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ಜನಸಾಮಾನ್ಯರ ಬದುಕ ಆತಂತ್ರವಾಗಿದೆ, ಅದರಲ್ಲೂ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗಿದ್ದರು ಸರ್ಕಾರ ಕಿವಿ ಮೂಗು ಇಲ್ಲದ ರೀತಿಯಲ್ಲಿ ವರ್ತನೆ ಮಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರಸ್ತುತ ಸಾಲಿನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಆದರೆ ಫಲಿತಾಂಶ ವಿಳಂಬ ಮಾಡಿದರಿಂದ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ತೊಂದರೆ ಆಗಿದೆ. ಈ ಹಿಂದೆ ಸರ್ಕಾರದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ವ್ಯವಸ್ಥೆ ಇತ್ತು, ಆದರೆ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ರದ್ದು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಹಾಗೂ ಹಿಂದುಳಿದ ವರ್ಗಗಳ ಶೇಕಡಾ 60 ರಷ್ಟು ವಿದ್ಯಾರ್ಥಿಗಳಿಗೆ ಇನ್ನೂ ಕೂಡ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿಲ್ಲಾ ಇದರಿಂದ ಎಷ್ಟೋ ಬಡ ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪದವಿ ಸೇರಿದಂತೆ ಉನ್ನತ ವ್ಯಾಸಂಗ ಮಡುವ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ದುಬಾರಿ ಮಾಡಿರುವುದರಿಂದ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಕತ್ತರಿ ಬೀಳುವಂತೆ ಆಗಿದೆ ಎಂದು ಆರೋಪಿಸಿದರು.
ಸರ್ಕಾರ ಕೂಡಲೇ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ನಂತರ ಉಪ ತಹಸೀಲ್ದಾರ್ ಮಹೇಶ್ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ತಾಲೂಕು NSUI ಅಧ್ಯಕ್ಷ ಆಕಾಶ್, ಜಿಲ್ಲಾ ಉಪಾಧ್ಯಕ್ಷ ಗೌತಮ್ ಹಾಗೂ ತಾಲೂಕು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಅಧ್ಯಕ್ಷ ಪ್ರದೀಪ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಹೋಂಡಾ ನಯಾಜ್, ಮಹಿಳಾ ಘಟಕ ಅಧ್ಯಕ್ಷೆ ಸೌಮ್ಯ, ಮರಿದೇವಯ್ಯ ಸೇರಿದಂತೆ ಸುಮಾರು 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದರು.
ಎಚ್.ಡಿ.ಕೋಟೆ ಪಟ್ಟಣದಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ವಿದ್ಯಾರ್ಥಿಗಳ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ನಡೆಯಿತು.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz